ಬೆಂಗಳೂರು:ಮನೆಯ ಮಾಲೀಕ ಆಚೆ ಹೋಗಿರುವುದನ್ನು ತಿಳಿದು ಕೆಲಸದವರು ನಕಲಿ ಕೀ ಮಾಡಿಸಿ ಮನೆ ದರೋಡೆ ಮಾಡಿದ್ದು, ಸದ್ಯ ಬೆಳ್ಳಂದೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರನ್ನು ಅಮಿತ್ ಶಾ ಅಪಮಾನಿಸಿದ್ದಾರೆ: ಪ್ರಿಯಾಂಕಾ ಗಾಂಧಿ!
ಕಳೆದ ಕೆಲ ದಿನಗಳ ಹಿಂದೆ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕೆಲಸದವರೊಬ್ಬರು ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಬೆಲೆ ಬಾಳುವ ವಸ್ತು ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದರು.
ಈ ವೇಳೆ ಮನೆ ಮಾಲೀಕ ವಾಪಸ್ ಬಂದು ನೋಡಿದಾಗ ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು, ದೂರಿನನ್ವಯ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನಗದು ಹಾಗೂ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದಾಗ ಪೊಲೀಸ್ ಆಯುಕ್ತ ದಯಾನಂದ ಅವರು ಪೊಲೀಸರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, 10 ಸಾವಿರ ರೂ. ಬಹುಮಾನ ಘೋಷಿಸಿದ್ದಾರೆ.
ಇನ್ನು ಇದೇ ರೀತಿಯ ಪ್ರಕರಣ ಸೋಲದೇವನಹಳ್ಳಿಯಲ್ಲಿ ಕೂಡ ನಡೆದಿದ್ದು, ಮನೆಮುಂದೆ ನಿಲ್ಲಿಸಿದ್ದ ಬೈಕ್ ಹಾಗೂ ಮನೆ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರ ಮಾಲೀಕ ಡಿಸೆಂಬರ್ ತಿಂಗಳಲ್ಲಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳಿದ್ದ ವೇಳೆ ಖದೀಮರು ಮನೆಯ ಬೀಗ ಒಡೆದು ಸುಮಾರು 103 ಗ್ರಾಂ ಚಿನ್ನಾಭರಣ ಹಾಗೂ ಮನೆ ಮುಂದಿದ್ದ ಬೈಕ್ ಕದ್ದು ಪರಾರಿಯಾಗಿದ್ದರು.
ಈ ಬಗ್ಗೆ ನೆರೆ ಹೊರೆಯವರು ಮನೆಯ ಮಾಲೀಕರಿಗೆ ಕರೆ ಮಾಡಿ ತಿಳಿಸಿದ್ದು, ಕೂಡಲೇ ಮನೆಗೆ ವಾಪಸ್ ಬಂದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ದೂರಿನನ್ವಯ ತನಿಖೆ ಆರಂಭಿಸಿದ ಪೊಲೀಸರು ವಿಶೇಷ ತಂಡ ರಚಿಸಿ ಬೇರೆ ಬೇರೆ ಆಯಾಮದಿಂದ ತನಿಖೆ ನಡೆಸಿದ್ದಾರೆ.
ಈ ವೇಳೆ ಜನವರಿ 7 ರಂದು ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು 103 ಗ್ರಾಂ ಚಿನ್ನಾಭರಣ ಹಾಗೂ 3 ದ್ವಿಚಕ್ರ ಬೈಕ್ ವಶಪಡಿಸಿಕೊಂಡಿದ್ದಾರೆ. ಸದ್ಯ ಪೊಲೀಸರ ಕಾರ್ಯಕ್ಕೆ ಪೊಲೀಸ್ ಆಯುಕ್ತ ದಯಾನಂದ ಅವರು ಅಭಿನಂದಿಸಿದ್ದಾರೆ.