ರಾಯಚೂರು:- ಆಕ್ಸಿಲರೇಟರ್ ಕಟ್ ಆಗಿ ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿ ಆಗಿದ್ದು, ಚಾಲಕ ಸೇರಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ರಾಯಚೂರಿನ ಸಿಂಧನೂರು ನಗರದ ಹೊರವಲಯದಲ್ಲಿ ಜರುಗಿದೆ.
ವಿದ್ಯಾರ್ಥಿಗಳಾದ ಹಯವದನ (18), ಸುಜಯೇಂದ್ರ(22), ಅಭಿಲಾಷ (20) ಹಾಗೂ ಚಾಲಕ ಜಂಸಾಲಿ ಶಿವ (20) ಮೃತ ದುರ್ದೈವಿಗಳು.
14 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನವು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಆಕ್ಸಿಲರೇಟರ್ ಕಟ್ ಆಗಿದ್ದರಿಂದ ವಾಹನ ಪಲ್ಟಿ ಹೊಡೆದಿದೆ. ಘಟನೆಗೆ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ.