ನವದೆಹಲಿ: ಮಹಾ ಕುಂಭಮೇಳ 2025 ಪ್ರಾರಂಭವಾಗಿದೆ. ಪ್ರಯಾಗ್ರಾಜ್ದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ದೇಶ ವಿದೇಶಗಳಿಂದ ಕೋಟ್ಯಂತರ ಜನರು ಆಗಮಿಸುತ್ತಿದ್ದು, ಇದೀಗ ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ದಿನದಂದೇ ಪ್ರಯಾಗ್ ರಾಜ್ನ ಕುಂಭ ಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಲಿದ್ದಾರೆ.
ಮೋದಿ ಮಾತ್ರವಲ್ಲದೆ, ರಾಷ್ಟ್ರಪತಿ ದೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ವರ್, ಗೃಹ ಸಚಿವ ಅಮಿತ್ ಶಾ ಕೂಡಾ ಪುಣ್ಯ ಸ್ನಾನ ಮಾಡುವ ದಿನಾಂಕ ನಿಗದಿಯಾಗಿದೆ. ಗೃಹಸಚಿವ ಅಮಿತ್ ಶಾ ಜ.27 ರಂದು, ಉಪರಾಷ್ಟ್ರಪತಿ ಜಗದೀಪ್ ಧನ್ವರ್ ಫೆ.1 ರಂದು, ರಾಷ್ಟ್ರಪತಿ ದೌಪದಿ ಮುರ್ಮು ಫೆ.10 ರಂದು ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ. ಕುಂಭಮೇಳಕ್ಕೆ ಗಣ್ಯಾತಿಗಣ್ಯರ ಆಗಮನ ಹಿನ್ನಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.