ಬೆಂಗಳೂರು: ಉಪಚುನಾವಣೆಯಲ್ಲಿ ಶ್ರೀರಾಮುಲು ಕೆಲಸ ಮಾಡಿಲ್ಲ ಎನ್ನುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಕೋರ್ ಕಮಿಟಿ ಸಭೆಯಲ್ಲಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ವಿರುದ್ಧ ಬಿ.ಶ್ರೀರಾಮುಲು ಆರೋಪಿಸಿದ್ದಾರೆ, ಉಪಚುನಾವಣೆಯಲ್ಲಿ ಶ್ರೀರಾಮುಲು ಕೆಲಸ ಮಾಡಿಲ್ಲ ಎನ್ನುವ ರೀತಿಯಲ್ಲಿ ಮಾತನಾಡಿದ್ದಾರೆ.
ಇದರಿಂದ ಅಸಮಾಧಾನಗೊಂಡ ಶ್ರೀರಾಮುಲು, ಇನ್ನೂ ಕೂಡ ಉಪಚುನಾವಣೆ ಸೋಲಿನ ಕುರಿತ ವರದಿಯನ್ನೇ ಕೊಟ್ಟಿಲ್ಲ. ಸದಾನಂದ ಗೌಡ ಸಮಿತಿ ಉಪ ಚುನಾವಣೆ ಕುರಿತ ವರದಿಯನ್ನೇ ಕೊಟ್ಟಿಲ್ಲ. ಅದಕ್ಕೂ ಮೊದಲು ನೀವು ಹೇಗೆ ಕೆಲಸ ಮಾಡಿಲ್ಲ ಎನ್ನುತ್ತಿರಿ ಎಂದು ಸಭೆಯಲ್ಲೇ ಪ್ರಶ್ನಿಸಿದ್ದಾರೆ.
ರಾಧಾಮೋಹನ್ ದಾಸ್ ಅಗರ್ವಾಲ್ ಏನೋ ಉತ್ತರ ಪ್ರದೇಶದವರು. ರಾಜ್ಯಾಧ್ಯಕ್ಷರಾಗಿ ನೀವಾದರೂ ಹೇಳಿ ನಮ್ಮ ರಕ್ಷಣೆಗೆ ಬರಬೇಕಲ್ಲವೇ? ಎಂದು ವಿಜಯೇಂದ್ರ ಅವರನ್ನು ಹೇಳಿದ್ದಾರೆ. ಇದಕ್ಕೆ ವಿಜಯೇಂದ್ರ ಪ್ರತಿಕ್ರಿಯಿಸಿ, ಇಲ್ಲ, ನನ್ನ ಬಗ್ಗೆಯೂ ಹೀಗೆ ಹೇಳಿದ್ದಾರೆ ಉತ್ತರಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ರಾಮುಲು, ನಿಮಗೆ ಇಷ್ಟ ಇಲ್ಲ ಅಂತಾದರೆ ಬೇಕಾದರೆ ನಾನು ಪಕ್ಷ ಬಿಡುತ್ತೇನೆ.
ಆದರೆ ಪಕ್ಷ ಬಿಡುವ ಮುನ್ನ ಏನು ಆಗಿದೆ ಎಂದು ಹೇಳಿ ಬಿಡುತ್ತೇನೆ. ಮೋದಿ, ಶಾ, ಹೈಕಮಾಂಡ್ ಎಲ್ಲರಿಗೂ ಏನು ಆಗಿದೆ ಎಂದು ಹೇಳುತ್ತೇನೆ. ನಾನು ಪಕ್ಷಕ್ಕೆ ನಿಷ್ಠೆಯಿಂದ ಇದ್ದೇನೆ, ಇಲ್ಲಿ ಸುಮ್ಮನಿದ್ದರೆ ಬೆಲೆಯೇ ಇಲ್ಲ . ಕೆಲಸ ಮಾಡಿದವರಿಗೆ ಬೆಲೆಯೇ ಇಲ್ಲ ಎಂದು ಶ್ರೀರಾಮುಲು ಆಕ್ರೋಶ ಹೊರಹಾಕಿದ್ದಾರೆ.