ಬೆಂಗಳೂರು: ಹೊಗಳುವ ಭರದಲ್ಲಿ ಮಾನಸಿಕ ಗುಲಾಮಗಿರಿ ತೋರಿಸಿದ್ದಾರೆ ಎಂದು ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಪ್ರಿಯಾಂಕಾ ಗಾಂಧಿಯನ್ನು ರಾಣಿ ಚೆನ್ನಮ್ಮಗೆ ಹೋಲಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,
ಹೊಗಳುವ ಭರದಲ್ಲಿ ಮಾನಸಿಕ ಗುಲಾಮಗಿರಿ ತೋರಿಸಿದ್ದಾರೆ. ಇದು ಭಟ್ಟಂಗಿತನದ ಹೇಳಿಕೆ. ಆ ಮೂಲಕ ಚೆನ್ನಮ್ಮಗೆ ಅಪಮಾನ ಮಾಡಲಾಗಿದೆ ಎಂದು ಕಿಡಿಕಾರಿದರು.
ಚಳಿಗಾಲದಲ್ಲಿ ಬಾಳೆಹಣ್ಣು ತಿನ್ನಬಹುದೇ..? ತಿಂದ್ರೆ ಏನಾಗುತ್ತದೆ.? ಇಲ್ಲಿದೆ ನೋಡಿ ಮಾಹಿತಿ
ಇನ್ನೂ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿ ಇಂದಿಗೆ ಒಂದು ವರ್ಷವಾಗಿದೆ. ಮಂದಿರ ನಿರ್ಮಾಣಕ್ಕೆ ಶ್ರಮಿಸಿದ, ಯೋಗದಾನ ನೀಡಿದ ಎಲ್ಲರನ್ನೂ ಸ್ಮರಿಸ್ತೇವೆ. ಮೋದಿಯವರ ಯೋಗದಾನವೂ ದೊಡ್ಡದಿದೆ, ಅವರಿಗೂ ಅಭಿನಂದನೆ ಸಲ್ಲಿಸ್ತೇವೆ ಎಂದರು.