ಮಹಾರಾಷ್ಟ್ರ : ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಕರ್ನಾಟಕ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಕನಿಷ್ಠ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಮುಂಬಯಿಗೆ ತೆರಳುತ್ತಿದ್ದ ಪುಷ್ಪಕ್ ಎಕ್ಸ್ಪ್ರೆಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಭಯಭೀತರಾದ ಪ್ರಯಾಣಿಕರು ಜೀವ ಭಯದಿಂದ ಚಲಿಸುವ ರೈಲಿನಿಂದ ಜಿಗಿಯಲು ಪ್ರಾರಂಭಿಸಿದ್ದಾರೆ. ಅದೇ ಸಮಯದಲ್ಲಿ ಪಕ್ಕದ ಹಳಿಯಲ್ಲಿ ಬರುತ್ತಿದ್ದ ಕರ್ನಾಟಕ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ 20ಕ್ಕೂ ಅಧಿಕ ಜನರು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ. ರೈಲಿನಲ್ಲಿ ಬೆಂಕಿ ಹತ್ತಿಕೊಂಡಿದೆ ಎಂದು ಪ್ರಯಾಣಿಕರು ಜಿಗಿಯಲು ಆರಂಭಿಸಿದ್ದಾರೆ. ಈ ವೇಳೆ ಪಕ್ಕದಲ್ಲೇ ಬರುತ್ತಿದ್ದ ಮತ್ತೊಂದು ಕರ್ನಾಟಕ ಎಕ್ಸ್ಪ್ರೆಸ್ ರೈಲಿನಡಿ ಬಿದ್ದಿದ್ದಾರೆ. ಕೆಲವು ಪ್ರಯಾಣಿಕರು ಈ ಎಕ್ಸ್ಪ್ರೆಸ್ ರೈಲಿನ ಅಡಿಯಲ್ಲಿ ಬಿದ್ದು ಸಾವನ್ನಪ್ಪಿದರು. ಇನ್ನು ಈ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.
ಚಳಿಗಾಲದಲ್ಲಿ ಬಾಳೆಹಣ್ಣು ತಿನ್ನಬಹುದೇ..? ತಿಂದ್ರೆ ಏನಾಗುತ್ತದೆ.? ಇಲ್ಲಿದೆ ನೋಡಿ ಮಾಹಿತಿ
ರೈಲ್ವೆ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಪಚೋರಾ ರೈಲು ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ಪುಷ್ಪಕ್ ಎಕ್ಸ್ ಪ್ರೆಸ್ ನಿಲುಗಡೆಯಾಗುತ್ತಿದ್ದಂತೆ, ರೈಲಿನಲ್ಲಿ ಬೆಂಕಿ ಹತ್ತಿಕೊಂಡಿದೆ ಎಂದು ವದಂತಿ ಹರಡಿತ್ತು. ಇದರಿಂದ ಭಯಗೊಂಡ ಕೆಲವರು ಆಗಲೇ ಜಿಗಿಯತೊಡಗಿದರು. ಆಗಲೇ ಬೆಂಗಳೂರು ಎಕ್ಸ್ ಪ್ರೆಸ್ ಮುಂದೆಯಿಂದ ಬರುತ್ತಿತ್ತು
, ಜನ ಜಿಗಿಯುತ್ತಿದ್ದಂತೆ ಕೆಲವರು ಈ ಬೆಂಗಳೂರು ಎಕ್ಸ್ ಪ್ರೆಸ್ ಅಡಿಗೆ ಬಿದ್ದಿದ್ದಾರೆ. ಇನ್ನು ಸಂಜೆ 4:20ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ 8 ಆಂಬ್ಯುಲೆನ್ಸ್ಗಳನ್ನು ರವಾನಿಸಲಾಗಿದೆ. ಅಲ್ಲದೆ, ಗಾಯಾಳುಗಳನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.