ಬೆಂಗಳೂರು:- ಮುಖ್ಯಮಂತ್ರಿ ಆಗಲು ಯೋಗ್ಯತೆ ಬೇಕು ಎಂದು ಡಿಕೆಶಿಗೆ ಸಿಟಿ ರವಿ ಟಾಂಗ್ ಕೊಟ್ಟಿದ್ದಾರೆ.
ರೈಲ್ವೆ ಇಲಾಖೆಯಲ್ಲಿ ಬೃಹತ್ ಉದ್ಯೋಗ: ಆಸಕ್ತ ನಿರುದ್ಯೋಗಿಗಳು ಅಪ್ಲೈ ಮಾಡಿ!
ಈ ಸಂಬಂಧ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿಯನ್ನು ರಾಣಿ ಚೆನ್ನಮ್ಮಗೆ ಹೋಲಿಸುವ ಮೂಲಕ ಚೆನ್ನಮ್ಮಗೆ ಅಪಮಾನ ಮಾಡಲಾಗಿದೆ ಎಂದರು. ಹೊಗಳುವ ಭರದಲ್ಲಿ ಮಾನಸಿಕ ಗುಲಾಮಗಿರಿ ತೋರಿಸಿದ್ದಾರೆ. ಇದು ಭಟ್ಟಂಗಿತನದ ಹೇಳಿಕೆ. ರಾಷ್ಟ್ರೀಯ ವ್ಯಕ್ತಿತ್ವಕ್ಕೂ ಈ ಮೂಲಕ ಅವಮಾನ ಮಾಡಲಾಗಿದೆ. ನಾಡಿನ ಜನತೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
ಡಿಕೆಶಿ ಸಿಎಂ ಆಗುವ ಕುರಿತು ಜೈನಗುರು ಭವಿಷ್ಯವಾಣಿ ನುಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯೋಗ ಇದ್ದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ ಯೋಗ್ಯತೆ ಇದ್ದವರು ಮಾತ್ರ ಒಳ್ಳೆಯ ಮುಖ್ಯಮಂತ್ರಿ ಆಗುತ್ತಾರೆ. ಸಿಎಂ ಆಗಲು ಯೋಗ್ಯತೆ ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ಗೆ ಟಾಂಗ್ ಕೊಟ್ಟರು.