2019 ರ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಇಂದು ಘೋಷಿಸಲಾಯಿತು. 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಹಲವು ಸಿನಿಮಾಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದುಕೊಂಡಿವೆ. ಪೈಲ್ವಾನ್ ಚಿತ್ರದ ನಟನೆಗಾಗಿ ಕಿಚ್ಚ ಸುದೀಪ್ ಅತ್ಯುತ್ತಮ ನಟ ಪ್ರಶಸ್ವಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಯು 20 ಸಾವಿರ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ಒಳಗೊಂಡಿದೆ. ನಟಿ ಅನುಪಮಾ ಗೌಡ ‘ತ್ರಯಂಬಕಂ’ ಸಿನಿಮಾ ನಟನೆಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.
IPL2025: RCBಗೆ ಬಿಗ್ ಶಾಕ್: ಮೊದಲ ಪಂದ್ಯಕ್ಕೆ ಕೈ ಕೊಟ್ಟ ಫಿಲ್ ಸಾಲ್ಟ್!
ಪೈಲ್ವಾನ್’ ಸಿನಿಮಾಗೆ ಎಸ್. ಕೃಷ್ಣ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಸುದೀಪ್ ಅವರು ಕುಸ್ತಿ ಪಟುವಾಗಿ ಕಾಣಿಸಿಕೊಂಡಿದ್ದಾರೆ. 2019ರ ಸೆಪ್ಟೆಂಬರ್ 12ರಂದು ‘ಪೈಲ್ವಾನ್’ ಚಿತ್ರ ಬಿಡುಗಡೆ ಆಗಿತ್ತು. ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ಪಡೆದ ಸುದೀಪ್ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.
ಪಿ. ಶೇಷಾದ್ರಿ ನಿರ್ದೇಶನ ಮಾಡಿದ ‘ಮೋಹನದಾಸ’ ಸಿನಿಮಾಗೆ ‘ಅತ್ಯುತ್ತಮ ಚಿತ್ರ’ ಪ್ರಶಸ್ತಿ ಸಿಕ್ಕಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶನದ ‘ಲವ್ ಮಾಕ್ಟೇಲ್’ 2ನೇ ‘ಅತ್ಯುತ್ತಮ ಸಿನಿಮಾ’ ಪ್ರಶಸ್ತಿ ಪಡೆದಿದೆ. ‘ಅರ್ಘ್ಯಂ’ 3ನೇ ಅತ್ಯುತ್ತಮ ಸಿನಿಮಾ ಆಗಿದೆ. ‘ಕನ್ನೇರಿ’ ಚಿತ್ರಕ್ಕೆ ‘ವಿಶೇಷ ಸಾಮಾಜಿಕ ಕಾಳಜಿಯ ಸಿನಿಮಾ’ ಪ್ರಶಸ್ತಿ ನೀಡಲಾಗಿದೆ.
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಇಂಡಿಯಾ ವರ್ಸಸ್ ಇಂಗ್ಲೆಂಡ್’ ಸಿನಿಮಾಗೆ ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿ ನೀಡಲಾಗಿದೆ. ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾದಲ್ಲಿನ ಅಭಿನಯಕ್ಕೆ ತಬಲಾ ನಾಣಿ ಅವರು ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅನುಷಾ ಕೃಷ್ಣ ಅವರು ‘ಬ್ರಾಹ್ಮಿ’ ಚಿತ್ರದಲ್ಲಿನ ನಟನೆಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ.
ದರ್ಶನ್ ನಟನೆಯ ‘ಯಜಮಾನ’ ಚಿತ್ರಕ್ಕಾಗಿ ವಿ. ಹರಿಕೃಷ್ಣ ಅವರು ‘ಅತ್ಯುತ್ತಮ ಸಂಗೀತ ನಿರ್ದೇಶನ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಮಿಂಚುಹುಳು’ ಚಿತ್ರಕ್ಕಾಗಿ ಮಾಸ್ಟರ್ ಪ್ರೀತಂ ಅವರಿಗೆ ಅತ್ಯುತ್ತಮ ಬಾಲ ನಟ ಪ್ರಶಸ್ತಿ ಸಿಕ್ಕಿದೆ. ‘ಸುಗಂಧಿ’ ಸಿನಿಮಾದಲ್ಲಿನ ಅಭಿನಯಕ್ಕೆ ಬೇಬಿ ವೈಷ್ಣವಿ ಅಡಿಗ ಅವರಿಗೆ ಅತ್ಯುತ್ತಮ ಬಾಲನಟಿ ಪ್ರಶಸ್ತಿ ನೀಡಲಾಗಿದೆ.
‘ಲವ್ ಮಾಕ್ಟೇಲ್’ ಚಿತ್ರದ ಗೀತೆಗಾಗಿ ರಘು ದೀಕ್ಷಿತ್ ಅವರು ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿ ಪಡೆದಿದ್ದಾರೆ. ‘ರಾಗ ಭೈರವಿ’ ಸಿನಿಮಾದಲ್ಲಿನ ಗೀತೆಗಾಗಿ ಜಯದೇವಿ ಜಿಂಗಮ ಶೆಟ್ಟಿ ಅವರಿಗೆ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿ ಕೊಡಲಾಗಿದೆ.
2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿ:-
ಮೊದಲ ಅತ್ಯುತ್ತಮ ಚಿತ್ರ – ಮೋಹನದಾಸ
ಎರಡನೇ ಅತ್ಯತ್ತಮ ಚಿತ್ರ – ಲವ್ ಮಾಕ್ ಟೈಲ್
ಮೂರನೇ ಅತ್ಯುತ್ತಮ ಚಿತ್ರ – ಅರ್ಘ್ಯಂ
ವಿಶೇಷ ಕಾಳಜಿ ಚಿತ್ತ – ಕನ್ನೇರಿ
ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ – ಇಂಡಿಯಾ V/S ಇಂಗ್ಲೆಂಡ್
ಅತ್ಯುತ್ತಮ ಮಕ್ಕಳ ಚಿತ್ರ – ಎಲ್ಲ ಆಡೋದು ನಾವು ಎಲ್ಲಿ ಆಡೋದು
ಅತ್ಯುತ್ತಮ ನಟ – ಶ್ರೀ ಕಿಚ್ಚ ಸುದೀಪ್ – ಚಿತ್ರ ಪೈಲ್ವಾನ್
ಅತ್ಯುತ್ತಮ ನಟಿ – ಕುಮಾರಿ ಅನುಪಮಾ ಗೌಡ – ಚಿತ್ರ ತ್ರಯಂಬಕಂ
ಅತ್ಯುತ್ತಮ ಪೋಷಕ ನಟ – ಶ್ರೀ ತಬಲ ನಾಣಿ – ಚಿತ್ರ ಕೆಮಿಸ್ಟ್ರಿ ಆಫ್ ಕರಿಯಪ್ಪ
ಅತ್ಯುತ್ತಮ ಪೋಷಕ ನಟಿ – ಕುಮಾರಿ ಅನೂಷ ಕೃಷ್ಣ – ಚಿತ್ರ ಬ್ರಾಹ್ಮಿ
ಅತ್ಯುತ್ತಮ ಸಂಗೀತ ನಿರ್ದೇಶಕ – ಶ್ರೀ ವಿ. ಹರಿಕೃಷ್ಣ – ಚಿತ್ರ ಯಜಮಾನ
ಅತ್ಯುತ್ತಮ ಹಿನ್ನೆಲೆ ಗಾಯಕ – ಶ್ರೀ ರಘು ದೀಕ್ಷಿತ್ – ಲವ್ ಮಾಕ್ ಟೈಲ್
ಅತ್ಯುತ್ತಮ ಹಿನ್ನೆಲೆ ಗಾಯಕಿ – ಡಾ. ಜಯದೇವಿ ಜಿಂಗಮ ಶೆಟ್ಟಿ – ಚಿತ್ರ ರಾಗಭೈರವಿ