ಬಾಗಲಕೋಟೆ:- ಮೂವರ ಕಾರ್ಮಿಕರ ಮೇಲೆ ಮಾರಣಾಂತಿಕೆ ಹಲ್ಲೆ ಮಾಡಿರುವ ಘಟನೆ ವಿಜಯಪುರದ ಹೊರವಲಯದ ಗಾಂಧಿನಗರದ ಸ್ಟಾರ ಚೌಕ್ ಬಳಿ ಇರುವ ಇಟ್ಟಿಗೆ ಭಟಿಯಲ್ಲಿ ನಡೆದಿದೆ.
2019 ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಪೈಲ್ವಾನ್ ಸುದೀಪ್ಗೆ ಅತ್ಯುತ್ತಮ ನಟ ಪ್ರಶಸ್ತಿ!
ಇಟ್ಟಿಗೆ ಭಟಿ ಮಾಲೀಕ ಖೇಮು ರಾಠೋಡ ಎಂಬಾತ ಕಾರ್ಮಿಕರ ಮೇಲೆ ಹಲ್ಲಿ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದವರಾದ ಸದಾಶಿವ್ ಮಾದರ, ಸದಾಶಿವ ಬಬಲಾದಿ, ಉಮೇಶ್ ಎಂಬ ಮೂವರು ಕಾರ್ಮಿಕರು ಹಲ್ಲೆಗೋಳಗಾಗಿದ್ದಾರೆ. ಸಂಕ್ರಾಂತಿ ಹಬ್ಬ ಮುಗಿಸಿಕೊಂಡು ಎರಡು ದಿನಗಳು ಕೆಲಸಕ್ಕೆ ವಿಳಂಬವಾಗಿ ಬಂದಿರುವುದರಿಂದ ಖೇಮು ರಾಠೋಡ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆ.
ಕಾರ್ಮಿಕರು ಎಷ್ಟೇ ಬೇಡಿಕೊಂಡರು ಬಿಡದೆ ಹಲ್ಲೆ ಮಾಡಿದ್ದಾನೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿರುವ ಇಟ್ಟಂಗಿ ಭಟ್ಟಿ ಮಾಲೀಕನ ಅಮಾನವೀಯ ಕೃತ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂವರು ಕಾರ್ಮಿಕರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.