ಬೆಂಗಳೂರು :- ಕೆಂಪೇಗೌಡ ಏರ್ಪೋರ್ಟ್ನಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ.
ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದು 11 ಮಂದಿ ದುರ್ಮರಣ: ಘಟನೆ ಹೇಗಾಯ್ತು ಗೊತ್ತಾ?
2025ನೇ ಸಾಲಿನ ಏರ್ ಶೋಗೆ ಕೌಂಟ್ ಡೌನ್ ಶುರುವಾಗಿದೆ. ಇತ್ತ ಏರ್ ಶೋ ಹಿನ್ನೆಲೆ ನಾಳೆಯಿಂದ ಫೆಬ್ರವರಿ 17ರವರೆಗೆ ಬರೋಬ್ಬರಿ 26 ದಿನಗಳ ಕಾಲ ಬೆಂಗಳೂರಿನ ಯಲಹಂಕ ಸುತ್ತಮುತ್ತ ಮಾಂಸ ಮಾರಾಟ, ನಾನ್ ವೆಜ್ ಹೊಟೇಲ್ ಚಟುವಟಿಕೆಗಳಿಗೆ ಪಾಲಿಕೆ ನಿಷೇಧ ಏರಿದೆ.
ಈ ಸಂಬಂಧ ಏರ್ಪೋರ್ಟ್ ತನ್ನ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಫೆಬ್ರವರಿ 10ರಿಂದ 14ರವರೆಗೆ ಏರೋ ಇಂಡಿಯಾದ 15ನೇ ಆವೃತ್ತಿ ಬೆಂಗಳೂರಿನ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಫೆ.5ರಿಂದ14ರ ವರೆಗೆ ಪ್ರತಿದಿನ ಕೆಲವು ಗಂಟೆಗಳ ಕಾಲ ವಾಯುಯಾನ ಮುಚ್ಚಲಾಗುತ್ತದೆ. ಇದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಆಗಲಿದೆ.
ಏರ್ ಶೋ ಹಿನ್ನೆಯಲ್ಲಿ 10 ದಿನಗಳ ಅವಧಿಯಲ್ಲಿ ಒಟ್ಟು 47 ಗಂಟೆಗಳ ಕಾಲ ವಿಮಾನಯಾನದಲ್ಲಿ ಅಡಚಣೆ ಉಂಟಾಗಲಿದೆ. ನಿಗದಿತ ಅವಧಿಯಲ್ಲಿ ಪ್ರತಿದಿನ ಕೆಲವು ಗಂಟೆಗಳ ಕಾಲ ವಾಯುಪ್ರದೇಶವನ್ನು ಕ್ಲೋಸ್ ಮಾಡಲಾಗುತ್ತದೆ. ಹೀಗಾಗಿ ವಿಮಾನಗಳ ಕಾರ್ಯಾಚರಣೆಗಳು ವ್ಯತ್ಯಯವಾಗಬಹುದು. ಇದರಿಂದ ಪ್ರಯಾಣಿಕರು ತಮ್ಮ ನಿಗದಿತ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಬಹುದಾಗಿದೆ.