ಬೆಂಗಳೂರು:- ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಸಂತ್ರಸ್ತರು ದೂರು ನೀಡಿದ್ರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ.
ಕಾಂಗ್ರೆಸ್ 136 ಸ್ಥಾನ ಪಡೆಯಲು ಡಿಕೆಶಿ ಪಾತ್ರ ದೊಡ್ಡದು: ಹೆಚ್ ವಿಶ್ವನಾಥ್!
ಈ ಸಂಬಂಧ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ. ಹಲವಡೆ ಮೈಕ್ರೋ ಫೈನಾನ್ಸ್ ಕಂಪನಿಗಳು ಗೈಡ್ ಲೈನ್ಸ್ ಉಲ್ಲಂಘನೆ ಮಾಡುತ್ತಿದ್ದಾರೆ. ಫೈನಾನ್ಸ್ ಕಂಪನಿಗಳ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತದೆ. ಲೈಸೆನ್ಸ್ ಇಲ್ಲದವರ ಬಗ್ಗೆ ಹಣಕಾಸು ಇಲಾಖೆ ಸರ್ವೆ ಮಾಡಬೇಕು ಎಂದರು.
ರಾಜ್ಯದಲ್ಲಿ ಎಲ್ಲಿಯಾದರೂ ಮೈಕ್ರೋ ಫೈನಾನ್ಸ್ ಕಂಪನಿಯವರು ಕಿರುಕುಳ ನೀಡಿದ್ರೆ ಸಂತ್ರಸ್ತರು ದೂರು ನೀಡಿದ್ರೆ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.