ಮಡಿಕೇರಿ:- ಕೊಡಗಿನ ಕುಶಾಲನಗರ ತಾಲೂಕಿನ ಕೂಡ್ಲೂರು ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿದ್ದ ಸಿಎನ್ಜಿ ಘಟಕದಲ್ಲಿ ಅನಿಲ ಸೋರಿಕೆಯಾದ ಘಟನೆ ಜರುಗಿದೆ.
ಸೋರಿಕೆಯಿಂದ ಮಂಗಳವಾರ ಸಂಜೆ ಘಟಕದ ಸುತ್ತಮುತ್ತ ಭಾರೀ ದುವಾರ್ಸನೆ ಬಂದಿದೆ. ಇದರಿಂದ ಸ್ಥಳೀಯ ನಿವಾಸಿಗಳಿಗೆ ಉಸಿರಾಟ ಸಮಸ್ಯೆಯಾಗಿ, ಆರೋಗ್ಯದಲ್ಲಿ ಏರುಪೇರಾಗಿದೆ. ಮಕ್ಕಳಲ್ಲಿ ವಾಂತಿ, ವಾಕರಿಗೆ ಹಾಗೂ ಅಸ್ವಸ್ಥತೆ ಉಂಟಾಗಿದೆ.
ಘಟನೆಯಿಂದ ಆತಂಕಗೊಂಡ ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್ ಅವರ ನೇತೃತ್ವದಲ್ಲಿ ಗ್ಯಾಸ್ ಬಂಕ್ಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಗ್ಯಾಸ್ ಘಟಕದವರ ನಿರ್ಲಕ್ಷ್ಯತನದಿಂದ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.