ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದ್ದು, ಲೋಕಾಯುಕ್ತ ವರದಿಯಲ್ಲಿ ಕ್ಲೀನ್ಚಿಟ್ ಸಿಕ್ಕಿದೆ.
ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್ಚಿಟ್ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.