ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಈಡನ್ ಗಾರ್ಡನ್ಸ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆಂಡ್ ಪ್ರದರ್ಶನ ತೋರಿದ ಭಾರತ 7 ವಿಕೆಟ್ ಗಳ ಅಮೋಘ ಗೆಲುವು ಸಾಧಿಸಿ 1-0 ಮುನ್ನಡೆ ಪಡೆಯಿತು.
ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. 255 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ ಅಭಿಷೇಕ್ 3 ಬೌಂಡರಿ ಹಾಗೂ 6 ಸಿಕ್ಸರ್ಗಳ ಸಹಿತ ತಮ್ಮ ಅರ್ಧಶತಕ ಪೂರೈಸಿದರು. ಇದು ಭಾರತದಲ್ಲಿ ಭಾರತೀಯ ಆಟಗಾರನೊಬ್ಬ ಸಿಡಿಸಿದ ಮೂರನೇ ವೇಗದ ಅರ್ಧಶತಕವಾಗಿದೆ.
ಇದರ ಜೊತೆಗೆ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಅಭಿ, ತನ್ನ ಕ್ರಿಕೆಟ್ ಗುರು ಯುವರಾಜ್ ಸಿಂಗ್ ಅವರ ದಾಖಲೆನ್ನು ಸಹ ಸರಿಗಟ್ಟಿದ್ದಾರೆ. ವಾಸ್ತವವಾಗಿ 2009ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಯುವರಾಜ್ ಸಿಂಗ್ 20 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.
ಬದನೇಕಾಯಿ ಕೇವಲ ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲ, ಆರೋಗ್ಯಕ್ಕೂ ಉತ್ತಮ!
ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ 34 ಎಸೆತಗಳಲ್ಲಿ ಒಟ್ಟು 79 ರನ್ ಗಳಿಸಿದರು. ಈ ವೇಳೆ ಅವರು 232.35 ಸ್ಟ್ರೈಕ್ ರೇಟ್ನಲ್ಲಿ 5 ಬೌಂಡರಿ ಮತ್ತು 8 ಸಿಕ್ಸರ್ಗಳನ್ನು ಬಾರಿಸಿದರು. ಇದರೊಂದಿಗೆ ಅಭಿಷೇಕ್ ಶರ್ಮಾ, 18 ವರ್ಷಗಳ ಹಿಂದೆ ಯುವರಾಜ್ ಸಿಂಗ್ ನಿರ್ಮಿಸಿದ್ದ ದಾಖಲೆಯನ್ನು ಮುರಿದಿದ್ದಾರೆ.
ವಾಸ್ತವವಾಗಿ, ಅಭಿಷೇಕ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ 8 ಸಿಕ್ಸರ್ ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಯುವರಾಜ್ ಸಿಂಗ್ 2007ರ ಟಿ20 ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧ 7 ಸಿಕ್ಸರ್ ಬಾರಿಸಿದ್ದರು. ಈ ಪಂದ್ಯದಲ್ಲಿ ಯುವರಾಜ್ 6 ಎಸೆತಗಳಲ್ಲಿ ಸತತ 6 ಸಿಕ್ಸರ್ ಸಿಡಿಸಿದ್ದು, ವಿಶ್ವ ದಾಖಲೆಯಾಗಿತ್ತು.
ಟಾಸ್ ಸೋತರೂ ಫಸ್ಟ್ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ಕೇವಲ 132 ರನ್ಗಳಿಗೆ ಆಲೌಟ್ ಆಗಿದೆ. ನಾಯಕ ಜೋಸ್ ಬಟ್ಲರ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು ಆಡಿದ 44 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ ಸಹಾಯದಿಂದ 68 ರನ್ ಬಾರಿಸಿದ್ರು. ಇಂಗ್ಲೆಂಡ್ 20 ಓವರ್ಗಳಲ್ಲಿ 132 ರನ್ಗಳಿಗೆ ಆಲೌಟ್ ಆಯಿತು.