ಗದಗ: ಗದಗ ಜಿಲ್ಲೆಯಲ್ಲಿ ಸರಣಿ ಕಳ್ಳತನ ನಡೆದಿದ್ದು, ಒಂದೇ ರಾತ್ರಿ ಮೂರು ಗ್ರಾಮಗಳಲ್ಲಿ ಐದು ಕಡೆ ಸಿನಿಮೀಯ ರೀತಿಯಲ್ಲಿ ಕಳ್ಳತನ ಮಾಡಿ ಖದೀಮರು ಎಸ್ಕೇಪ್ ಆಗಿದ್ದಾರೆ. ಶಿರಹಟ್ಟಿ ಹಾಗೂ ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ಕಳ್ಳತನ ನಡೆದಿದ್ದು, ಸುಮಾರು ನಾಲ್ಕಾರು ಜನರ ತಂಡದಿಂದ ಈ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದೆ.
ನಾಲ್ಕು ಸೈಬರ್ ಪ್ರಕರಣ ಬೇಧಿಸಿದ ಸಿಇಎನ್ ಠಾಣೆ ಪೋಲಿಸರು : ಎಸ್ ಪಿ ಶ್ಲಾಘನೆ
ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ, ಬನ್ನಿಕೊಪ್ಪ ಗ್ರಾಮ ಮತ್ತು ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದಲ್ಲಿ ಕಳ್ಳತನ ನಡೆದಿದೆ. ಬೆಳ್ಳಟ್ಟಿ ಗ್ರಾಮದಲ್ಲಿ ಎಗ್ ರೈಸ್ ಅಂಗಡಿ, ಪಾನ್ ಶಾಪ್ ಮತ್ತು ಬನ್ನಿಕೊಪ್ಪ ಗ್ರಾಮದಲ್ಲಿ ಎರಡು ಪಾನ್ ಶಾಪ್ ಮತ್ತು ಬಾಗೇವಾಡಿ ಗ್ರಾಮದಲ್ಲಿ ಮನೆ ಕಳ್ಳತನ ಮಾಡಿ ಖದೀಮರು ಪರಾರಿಯಾಗಿದ್ದಾರೆ. ಮನೆಯಲ್ಲಿದ್ದ 50 ಗ್ರಾಂ ಬಂಗಾರ ಆಭರಣ, ಸುಮಾರು 100 ಗ್ರಾಂ ಬೆಳ್ಳಿ ವಸ್ತುಗಳು, ಸೀರೆಗಳು, ಇತರೆ ವಸ್ತುಗಳನ್ನು ಕದ್ದೊಯ್ದಿದ್ದಾರೆ. ಆದರೆ ಕಡಕೋಳ ಗ್ರಾಮದಲ್ಲಿ ಕಳ್ಳತನಕ್ಕೆ ಯತ್ನ ನಡೆಸಿದ್ದು, ವಿಫಲಗೊಂಡಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂಬಂಧ ಶಿರಹಟ್ಟಿ ಹಾಗೂ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿದೆ.