ಮಂಗಳೂರು:- ಮಂಗಳೂರು ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ರಾಮಸೇನೆಯ ಸಂಸ್ಥಾಪಕನನ್ನು ಅರೆಸ್ಟ್ ಮಾಡಲಾಗಿದೆ.
ನೀವು ಚಹಾ ಪ್ರಿಯರಾ!? 1 ತಿಂಗಳು ಟೀ ಕುಡಿಯೋದನ್ನು ನಿಲ್ಲಿಸಿದ್ರೆ ಏನ್ ಆಗತ್ತೆ!
ಸೆಲೂನ್ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದು, ಪೀಠೋಪಕರಣ ಧ್ವಂಸ ಮಾಡಿದ್ದರು. ಈ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿಸಿದ್ದು, ಬಳಿಕ ರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಸಾದ್ ಅತ್ತಾವರ್ ಹಾಗೂ 9ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ದಾಳಿ ವೇಳೆ, ನಾಲ್ಕು ಜನ ಯುವತಿಯರು ಹಾಗೂ ಓರ್ವ ವ್ಯಕ್ತಿ ಸೆಲೂನ್ನಲ್ಲಿ ಇದ್ದರು. ಈ ವೇಳೆ ವ್ಯಕ್ತಿಯ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಅಲ್ಲದೇ ಪೀಠೋಪಕರಣ ಧ್ವಂಸ ಮಾಡಿದ್ದರು. ಬಳಿಕ ಕಾನೂನು ಸುವ್ಯವಸ್ಥೆ ಡಿಸಿಪಿ ಸಿದ್ದಾರ್ಥ್ ಗೋಯಲ್ ಅವರು ಮಸಾಜ್ ಪಾರ್ಲರ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.