ಚಿತ್ರದುರ್ಗ:– 2028ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ನಾವು ಐದು ವರ್ಷ ಅಧಿಕಾರ ಮಾಡುತ್ತೇವೆ. 2028ರಲ್ಲೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು. ಬಿಜೆಪಿಯಲ್ಲಿ ಹೆಚ್ಚು ಗುಂಪುಗಳಿವೆ. ನಮ್ಮಲ್ಲಿ ಯಾವುದೇ ಗುಂಪುಗಳಿಲ್ಲ. ನಾನು, ಡಿಕೆಶಿ ಇಲ್ಲಿಯೇ ಇದ್ದೇವೆ ಎಂದು ಹೇಳಿ ಪಕ್ಕದಲ್ಲಿದ್ದ ಡಿಕೆ ಶಿವಕುಮಾರ್ ಅವರನ್ನು ತೋರಿಸಿ ಒಗ್ಗಟ್ಟು ಪ್ರದರ್ಶಿಸಿದರು
ಇನ್ನು ನಮ್ಮ ಪಾರ್ಟಿಯಲ್ಲಿ ಯಾವುದೇ ಗ್ರೂಪಿಸಂ ಇಲ್ಲ. ಬಿಜೆಪಿ ಪಾರ್ಟಿಯಲ್ಲಿ ಕಚ್ಚಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಒಗ್ಗಟ್ಟಾಗಿದೆ. ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ. ಆದ್ದರಿಂದ ನಾವು ಐದು ವರ್ಷ ಅಧಿಕಾರ ಮಾಡುತ್ತೇವೆ. 2028ಕ್ಕೂ ಮತ್ತೆ ಅಧಿಕಾರಕ್ಕೆ ನಾವೇ ಬರುತ್ತೇವೆ ಎಂದರು.
ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ. 1,274 ಕೋಟಿ ರೂ. ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ಧಪಡಿಸಿದೆ. ಇದು ಜಾರಿಯಾದರೆ ಈ ಭಾಗದ ಕಟ್ಟ ಕಡೆಯ ಜಮೀನಿಗೂ ನೀರು ಒದಗುತ್ತದೆ ಎಂದು ತಿಳಿಸಿದರು