ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆಗಳಲ್ಲೇ ಸಿಬ್ಬಂದಿ ಕೊರತೆ ಎದುರಾಗಿದೆ. ಆದರೆ ಆಸ್ಪತ್ರೆಯ ಸಿಬ್ಬಂದಿ ನೇಮಕಕ್ಕೆ ಸರ್ಕಾರಕ್ಕೆ ಮೀನಾಮೇಷ ಎಣಿಸುತ್ತಿದೆ. ಇದರಿಂದ ರೋಗಿಗಳು ಪರದಾಡುವಂತಾಗಿದೆ.
ವಿಕ್ಟೋರಿಯಾ, ವಾಣಿ ವಿಲಾಸ್ ಆಸ್ಪತ್ರೆಗಳು ಸರ್ಕಾರಿ ಆಸ್ಪತ್ರೆಗಳಲ್ಲೇ ದೊಡ್ಡವು. ಇಲ್ಲಿ ಸಾಮಾನ್ಯವಾಗಿ ಎಲ್ಲಾ ರೀತಿಯ ಚಿಕಿತ್ಸೆಗಳು ಸಿಗುತ್ತವೆ. ಇದರ ಜೊತೆಗೆ ಗ್ಯಾಸ್ಟ್ರೋಎಂಟ್ರಾಲಜಿ, ಸ್ಕಿನ್ ಡಿಪಾರ್ಟ್ಮೆಂಟ್, ಟ್ರಾಮ ಕೇರ್ ಸೆಂಟರ್, ಸೇರಿದಂತೆ ವಿವಿಧ ಪ್ರಮುಖ ಚಿಕಿತ್ಸೆಗಳನ್ನು ಕಡಿಮೆ ವೆಚ್ಚದಲ್ಲಿ ನೀಡಲಾಗುತ್ತದೆ. ಅದರಲ್ಲೂ ವಾಣಿ ವಿಲಾಸ್ ಆಸ್ಪತ್ರೆ ಹೆರಿಗೆ, ತಾಯಿ ಮಗುವಿನ ಆರೈಕೆಯಲ್ಲಿ ಮುಂದು. ಇದೇ ಕಾರಣದಿಂದ ಕೇವಲ ಕರ್ನಾಟಕವಲ್ಲದೆ ಬೇರೆ ರಾಜ್ಯಗಳಿಂದಲೂ ರೋಗಿಗಳು ಚಿಕಿತ್ಸೆಗೆ ಬರುತ್ತಾರೆ. ಆದರೆ ಇಲ್ಲಿ ರೋಗಿಗಳ ಸಂಖ್ಯೆಗೆ ತಕ್ಕಂತೆ ವೈದ್ಯರು, ಸಿಬ್ಬಂದಿ ಮಾತ್ರ ಇಲ್ಲ. ಇದರಿಂದ ರೋಗಿಗಳಿಗೆ ತೊಂದರೆ ಆಗುತ್ತಿದೆ.
ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯಕೀಯ ಸಿಬ್ಬಂದಿ ಕೊರತೆ ಎದುರಾಗಿದೆ. ಹೆಸರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು. ಆದರೆ ವೈದ್ಯಕೀಯ ಸಿಬ್ಬಂದಿಗಳೇ ಸಾಕಷ್ಟು ಇಲ್ಲ. ಸಾಕಷ್ಟು ಪ್ರಮಾಣದಲ್ಲಿ ವೈದ್ಯರು, ಸಿಬ್ಬಂದಿ ಇಲ್ಲದೆ ಬಡ ರೋಗಿಗಳ ಪರದಾಟ ಶುರುವಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆ, ವಾಣಿ ವಿಲಾಸ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ವೈದ್ಯಕೀಯ ಸಿಬ್ಬಂದಿಯೇ ಇಲ್ಲ. ರಾಷ್ಟ್ರೀಯ ವೈದ್ಯಕೀಯ ಆಯೋಗದ ಮಾನದಂಡದ ಪ್ರಕಾರ ಇರಬೇಕಾದಷ್ಟು ವೈದ್ಯರೇ ಈ ಆಸ್ಪತ್ರೆಗಳಲ್ಲಿ ಇಲ್ಲ. ರೋಗಿಗಳ ಸಂಖ್ಯೆಗೆ ಅನುಗುಣವಾಗಿ ವೈದ್ಯರ ಹುದ್ದೆಗಳನ್ನು ಸೃಷ್ಟಿಸಲಾಗಿಲ್ಲ. ಈಗಾಗಲೇ ಮಂಜೂರಾಗಿರುವ ಹುದ್ದೆಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗದ ಪರಿಣಾಮ ರೋಗಿಗಳ ದಟ್ಟಣೆಯ ನಿರ್ವಹಣೆಗೆ ಇರುವ ವೈದ್ಯರು ಪರದಾಡುವಂತಾಗಿದೆ.
ರೋಗಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಆದರೆ ವೈದ್ಯರು ಹಾಗೂ ಹಾಸಿಗೆಗಳ ಸಂಖ್ಯೆ ರೋಗಿಗಳ ಅನುಪಾತಕ್ಕೆ ಅನುಗುಣವಾಗಿ ಹೆಚ್ಚಳವಾಗಿಲ್ಲ.