ಬೆಂಗಳೂರು:- ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ.
ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ ಇತ್ಯಾದಿಗಳನ್ನು ಚಿತ್ರೀಕರಿಸಲು ಶುಲ್ಕ ಪಡೆದು ಅನುಮತಿಸಲಾಗುತ್ತಿದೆ. ಪ್ರಸ್ತುತ ಅರಣ್ಯ ಪ್ರದೇಶದ ಚಿತ್ರೀಕರಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅನುಮತಿ ನೀಡುತ್ತಿರುವುದು ಸರಿಯಷ್ಟೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶದ ಚಿತ್ರೀಕರಣದಿಂದಾಗಬಹುದಾದ ತೊಂದರೆಗಳು ಹಾಗೂ ಇದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಚುರಗೊಂಡಿರುವುದನ್ನು ಗಮನಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರಣ್ಯ ಪ್ರದೇಶಗಳಲ್ಲಿ ವಿವಿಧ ಬಗೆಯ ಚಿತ್ರೀಕರಣಕ್ಕೆ ಸ್ಥಳೀಯ ಮಟ್ಟದ ಅಧಿಕಾರಿಗಳು ಅನುಮತಿಯನ್ನು ನೀಡುತ್ತಿದ್ದಾರೆ. ಇದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿಯು ಹೊರ ಜಗತ್ತಿಗೆ ದೊರೆಯುವ ಸಂಭವವಿರುತ್ತದೆ. ಅರಣ್ಯ ಮತ್ತು ವನ್ಯಜೀವಿಗಳ ಸೂಕ್ಷ್ಮತೆಯ ಅರಿವಿಲ್ಲದೆ ಪರಿಸರ ಹಾಗೂ ಜೀವ ವೈವಿಧ್ಯಕ್ಕೆ ದಕ್ಕೆ ಉಂಟಾಗುವ ಸಂಭವವಿರುತ್ತದೆ’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಅರಣ್ಯ ಹಾಗೂ ವನ್ಯಜೀವಿಗಳನ್ನು ಉಳಿಸುವ ಹಿತದೃಷ್ಟಿಯಿಂದ, ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಬೇಕು’ ಎಂದು ತಿಳಿಸಾಗಿದೆ.