ಬೆಂಗಳೂರು: ವಿವಾಹಿತ ಮಹಿಳೆಯನ್ನ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ರಾಮಮೂರ್ತಿ ನಗರದ ಚೆನ್ನಸಂದ್ರ ಕೆರೆ ಬಳಿ ನಡೆದಿದೆ. ನಜ್ಮ(28) ಕೊಲೆಯಾದ ಮಹಿಳೆಯಾಗಿದ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಗ್ಲಾದೇಶ ಮೂಲದ ಮಹಿಳೆ ಹಾಗೂ ಆಕೆಯ ಕಳೆದ ಆರು ವರ್ಷಗಳಿಂದಲೂ ಮೂವರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ನಗರದ ಖಾಸಗಿ ಅಪಾರ್ಟ್ಮೆಂಟ್ವೊಂದರಲ್ಲಿ ಮಹಿಳೆ ಮನೆಗೆಲಸ ಮಾಡಿಕೊಂಡಿದ್ದಳು.
Relationship Tips: ಸಂಗಾತಿ ಜೊತೆ ಗಟ್ಟಿ ಸಂಬಂಧ ನಿಭಾಯಿಸೋದು ಹೇಗೆ..? ಇಲ್ಲಿದೆ ಟಿಪ್ಸ್
ಗುರುವಾರ ಕೆಲಸ ಮುಗಿಸಿ ಅಪಾರ್ಟ್ಮೆಂಟ್ನಿಂದ ತೆರಳಿದ್ದ ಮಹಿಳೆ, ಮನೆಗೆ ಮರಳಿರಲಿಲ್ಲ. ಬೆಳಗ್ಗೆ ಕಲ್ಕೆರೆ ಸಮೀಪದ ನಿರ್ಜನ ಪ್ರದೇಶದಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ರಾಮಮೂರ್ತಿನಗರ ಠಾಣೆ ಪೊಲೀಸರು, ವಿಧಿ ವಿಜ್ಞಾನ ಪ್ರಯೋಗಾಲಯ ಹಾಗೂ ಸೋಕೋ ಟೀಂ ಸಿಬ್ಬಂದಿ ಭೇಟಿ ನೀಡಿ, ತಪಾಸಣೆ ನಡೆಸಿದ್ದಾರೆ.