ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್, ಪವಿತ್ರಾಗೌಡ ಸೇರಿ 17 ಆರೋಪಿಗಳಿಗೆ ಜಾಮೀನು ಸಿಕ್ಕಿ ಹೊರಗೆ ಬಂದಿದ್ರೂ ನೆಮ್ಮದಿ ಇಲ್ಲ.ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಬೇಲ್ ಕ್ಯಾನ್ಸಲ್ ಮಾಡಲು ಪ್ರಾಸಿಕ್ಯೂಷನ್ ಸುಪ್ರೀಂ ಮೊರೆ ಹೋಗಿತ್ತು. ನಿನ್ನೆ ವಿಚಾರಣೆ ನೆಡೆಸಿದ ಸುಪ್ರೀ ಕೋರ್ಟ್ ಎಲ್ಲರಿಗೂ ನೋಟೀಸ್ ಜಾರಿ ಮಾಡಿದೆ..
ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅಂಡ್ ಗ್ಯಾಂಗ್ಗೆ ಹೈಕೋರ್ಟ್ ಜಾಮೀನು ನೀಡಿದ್ದರಿಂದ ಲ್ಲಾ ಅರೋಪಿಗಳು 6 ತಿಂಗಳ ನಂತರ ಜೈಲಿಂದ ಹೊರಗೆ ಬಂದಿದ್ರು. ಆದ್ರೆ ಹೈಕೋರ್ಟ್ ನೀಡಿರುವ ಜಾಮೀನು ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಿದ್ರು..ಇಂದು ವಿಚಾರಣೆ ಕೈತೆತ್ತಿಕೊಂಡ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ..
ಹೀಗಾಗಿ ದರ್ಶನ್ ಹಾಗೂ ಗ್ಯಾಂಗ್ಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಜಾಮೀನು ರದ್ದಾಗಿ ಮತ್ತೆ ಜೈಲು ಸೇರುವ ಆತಂಕದಲ್ಲಿ ದರ್ಶನ್ ಅಂಡ್ ಗ್ಯಾಂಗ್ಗೆ ನಿಟ್ಟುಸಿರು ಬಿಟ್ಟಿದ್ದಾರೆ… ಮೆರಿಟ್ ಆಧಾರದ ಮೇಲೆ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್ ದರ್ಶನ್ ಸೇರಿದಂತೆ ಏಳು ಮಂದಿಗೆ ನೋಟೀಸ್ ನೀಡಿದೆ. ನೋಟೀಸ್ ನೀಡಿ, ವಿಚಾರಣೆಯನ್ನು ಮುಂದೂಡಿದೆ.
Hibiscus Benefits: ದಾಸವಾಳ ಹೂವು ಪೂಜೆಗೆ ಮಾತ್ರವಲ್ಲ, ಕೂದಲು-ಚರ್ಮದ ಆರೋಗ್ಯಕ್ಕೂ ಬೇಕು!
ಇನ್ನು ಸುಪ್ರೀಂ ಕೋರ್ಟ್ ನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಗೆ ನೀಡಿರುವ ಜಾಮೀನು ರದ್ದು ಕೋರಿ ಸಲ್ಲಿಸಿರುವ ಅರ್ಜಿ ಕೇಸ್ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ನಮ್ಮ ಪೊಲೀಸರು ಏನು ಮಾಡಬೇಕೋ ಅದನ್ನ ಮಾಡಿದ್ದಾರೆ. ಮಾಹಿತಿ ಸೇರಿ ಹಲವು ದಾಖಲೆ ಕೊಟ್ಟಿದ್ದಾರೆ. ಇವತ್ತು ಏನು ತೀರ್ಪು ಬರುತ್ತದೆ ನೋಡಬೇಕು ತೀರ್ಪು ಏನು ಬರುತ್ತೋ ನಂತರ ಮುಂದುವರೆಯಬೇಕಾಗುತ್ತದೆ ಎಂದಿದ್ದಾರೆ..
ಸದ್ಯ ದರ್ಶನ್ ಇನ್ನೂ ಆನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಸಂಕ್ರಾಂತಿ ಬಳಿಕ ಶಸ್ತ್ರ ಚಿಕಿತ್ಸೆಗೆ ಒಳಗಾಗಬಹುದು ಎಂದು ವರದಿಗಳಾಗಿದ್ದವು. ಆದರೆ, ಇನ್ನು ಶಸ್ತ್ರ ಚಿಕಿತ್ಸೆಗೆ ಮುಂದಾಗಿಲ್ಲ. ಈ ಮಧ್ಯೆ ಪೊಲೀಸರು ಸುಪ್ರೀಂ ಕೋರ್ಟ್ ಗೆ ಹೋಗಿರುವುದರಿಂದ ದರ್ಶನ್ ಅಂಡ್ ಗ್ಯಾಂಗ್ ನಲ್ಲಿ ಆತಂಕ ಮನೆ ಮಾಡಿತ್ತು. ಈಗ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡದೆ ನೋಟೀಸ್ ನೀಡಿರುವುದು ಡಿ ಗ್ಯಾಂಗ್ ಗೆ ರಿಲೀಫ್ ಸಿಕ್ಕಂತಾಗಿದೆ.