ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ ಗಳ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದೆ. ಮೈಕ್ರೋ ಫೈನಾನ್ಸ್ ಹಾಗೂ ಸಾಲಗಾರರ ಕಾಟಕ್ಕೆ ವ್ಯಕ್ತಿಯೋರ್ವನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ವಳೆಗೆರ ಮೆಣಸ ಗ್ರಾಮದಲ್ಲಿ ನಡೆದಿದೆ. ಒಳಗೆರೆಮೆಣಸ ಗ್ರಾಮದ ಲೋಹಿತ್ @ ನವೀನ್ (35) ಮೃತ ದುರ್ದೈವಿ.
ಮೈಕ್ರೋ ಫೈನಾನ್ಸ್ ಅಧಿಕಾರಿಗಳ ಸಭೆ ಕರೆದ ತಹಶೀಲ್ದಾರ್ : ಶಿವಾನಂದ ಮೇತ್ರೆ
ಮೃತ ಲೋಹಿತ್ ವಿವಿಧ ಮೈಕ್ರೋ ಫೈನಾನ್ಸ್ ಖಾಸಗಿ ವ್ಯಕ್ತಿಗಳಿಂದಲೂ ಸಾಲ ಪಡೆದಿದ್ದನು. ಕಳೆದ ವಾರ ಸಾಲಗಾರರ ಕಾಟಕ್ಕೆ ಬೇಸತ್ತು ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಗೆ ದೂರು ಕೂಡ ಸಲ್ಲಿಕೆ ಮಾಡಿದ್ರು. ಅಲ್ಲೂ ರಕ್ಷಣೆ ಸಿಗದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಮುಂಜಾನೆ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.