ಚಾಮರಾಜನಗರ : ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ 76 ನೇ ಗಣರಾಜ್ಯೋತ್ಸವವು ಸಡಗರ ಸಂಭ್ರಮದಿಂದ ಜರುಗಿತು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ಮೈದಾನದಲ್ಲಿ ನಡೆದ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ವಿವಿಧ ಪೊಲೀಸ್ ತುಕಡಿಗಳು, ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಬಳಿಕ ಗಣರಾಜ್ಯೋತ್ಸವ ಉದ್ದೇಶಿಸಿ ಸಚಿವರು ಭಾಷಣ ಮಾಡಿದರು.
ಸಮಾರಂಭದಲ್ಲಿ ಸಂಸದ ಸುನೀಲ್ ಬೋಸ್, ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಎಸ್ಪಿ ಕವಿತಾ ಸೇರಿದಂತೆ ಸರ್ಕಾರಿ ಅಧಿಕಾರಿಗಳು , ಜನಪ್ರತಿನಿಧಿಗಳು ಸಂಘಟನೆಗಳ ಮುಖಂಡರು ವಿವಿಧ ಶಾಲೆಯ ಮಕ್ಕಳು ಮತ್ತು ಪೋಲೀಸರು ಉಪಸ್ಥಿತರಿದ್ರು.