ಬೆಂಗಳೂರು/ನವದೆಹಲಿ:- ಜ.26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮ, ದೇಶಭಕ್ತಿಗಳಿಂದ ಆಚರಿಸುತ್ತೇವೆಯೋ ಅಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನೂ ಆಚರಿಸುತ್ತೇವೆ.
ಆ.15 ಬ್ರಿಟಿಷರಿಂದ ತಾತ್ವಿಕವಾಗಿ ಸ್ವಾತಂತ್ರ್ಯ ಪಡೆದುಕೊಂಡ ದಿನವಾದರೆ, ಜ.26 1950 ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಿದ ದಿನ. ರಾಜಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನ. ಈ ಕಾರಣಕ್ಕಾಗಿ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಅತ್ಯಂತ ಮಹತ್ವ ದಿನ. ಭಾರತ ತನ್ನದೇ ಆದ ಸಂವಿಧಾನವನ್ನು ಜಾರಿಗೆ ತರುತ್ತಿದ್ದಂತೆಯೇ ಪ್ರಜಾಪ್ರಭುತ್ವ ಗಣರಾಜ್ಯವಾಗಿ ಬದಲಾಯಿತು. ಸರಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಜ.26 ರಂದೇ ಏಕೆ ಆಚರಣೆ ಮಾಡಲಾಗುತ್ತದೆ ಎಂಬುದಕ್ಕೆ ಇಲ್ಲಿದೆ ಮಾಹಿತಿ.
ಹೌದು, ಭಾರತವು 76ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮದಲ್ಲಿದ್ದು, ಈಗಾಗಲೇ ಈ ದಿನದ ಆಚರಣೆ ಎಲ್ಲೆಲ್ಲೂ ನಡೆಯುತ್ತಿದೆ. ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಅತ್ಯಂತ ಮಹತ್ವ ದಿನವಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಆಗಸ್ಟ್ 15 ಬ್ರಿಟಿಷರಿಂದ ತಾತ್ವಿಕವಾಗಿ ಸ್ವಾತಂತ್ರ್ಯ ಪಡೆದುಕೊಂಡ ದಿನವಾದರೆ, 1950 ಜನವರಿ 26 ರಂದು ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಲಾಗಿದ್ದು, ರಾಜಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವವು ಅಸ್ಥಿತ್ವಕ್ಕೆ ಬಂದ ದಿನವಾಗಿದೆ. ಹೀಗಾಗಿ ಈ ದಿನವು ಸ್ವಾತಂತ್ರ್ಯ ದಿನದಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.
1950ರ ಜನವರಿ 26ರಂದು ಸಂವಿಧಾನವನ್ನು ಅಂಗೀಕರಿಸುವ ಮೂಲಕ ಗಣರಾಜ್ಯ ಎಂದು ಘೋಷಿಸಲ್ಪಟ್ಟ ದಿನವಾಗಿದೆ. ದೇಶದ ಮೊದಲ ಸಂವಿಧಾನ ಸಭೆ 1946ರ ಡಿಸೆಂಬರ್ 9ರಂದು ತನ್ನ ಮೊದಲ ಅಧಿವೇಶನ ನಡೆಸಿತ್ತು. ಕೊನೆಯ ಅಧಿವೇಶನ 1949ರ ನವೆಂಬರ್ 26ರಂದು ನಡೆದಿತ್ತು. ಡಾ.ಬಿ.ಆರ್. ಅಂಬೇಡ್ಕರ್ ನೇತೃತ್ವದ ಸಂವಿಧಾನ ರಚನಾ ಸಮಿತಿ ರಚಿಸಿದ ಸಂವಿಧಾನವನ್ನು ಒಂದು ವರ್ಷದ ಬಳಿಕ ಅಂಗೀಕರಿಸಲಾಯಿತು. ಹೀಗಾಗಿ 26 ಜನವರಿ 1950 ರಂದು ಸಂವಿಧಾನ ಜಾರಿಗೆ ಬಂದಿತು. ಅಂದಿನ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಭಾರತದ ಬಾವುಟವನ್ನು ಹಾರಿಸಿ ಸಂವಿಧಾನ ಜಾರಿಗೆ ಬಂದ ದಿನವನ್ನು ಘೋಷಿಸಿದ್ದರು. ಅಂದಿನಿಂದ ಪ್ರತಿ ವರ್ಷ ಜನವರಿ 26 ಗಣರಾಜ್ಯೋತ್ಸವ ದಿನವನ್ನು ಹಬ್ಬದಂತೆ ದೇಶದಾದಂತ್ಯ ಆಚರಿಸಲಾಗುತ್ತಿದೆ.
ಪ್ರತಿ ವರ್ಷ ಭಾರತ ಸರ್ಕಾರವು ಗಣರಾಜ್ಯೋತ್ಸವವನ್ನು ಒಂದು ನಿರ್ದಿಷ್ಟ ಥೀಮ್ ನಲ್ಲಿ ಆಚರಿಸಲಾಗುತ್ತದೆ. ಈ ವರ್ಷ ‘ಸುವರ್ಣ ಭಾರತ: ಪರಂಪರೆ ಮತ್ತು ಪ್ರಗತಿ‘ ಎಂಬ ಥೀಮ್ ನಲ್ಲಿ 76 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಇದು ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಅದರ ಬೆಳವಣಿಗೆ ಹಾಗೂ ಅಭಿವೃದ್ಧಿಯನ್ನು ಎತ್ತಿ ತೋರಿಸುತ್ತದೆ.
ರಾಜಪ್ರಭುತ್ವವು ಅಂತ್ಯವಾಗಿ ಭಾರತದಲ್ಲಿ ಸಂವಿಧಾನವನ್ನು ಸ್ಥಾಪಿಸಿದ ದಿನವಾಗಿದ್ದು ಈ ದಿನದ ಆಚರಣೆಯೂ ಮಹತ್ವದ್ದಾಗಿದೆ. ಹೀಗಾಗಿ ಭಾರತವು ಪ್ರತಿ ವರ್ಷವು ಗಣರಾಜ್ಯೋತ್ಸವ ದಿನಕ್ಕೆ ವಿದೇಶದಿಂದ ಗಣ್ಯ ವ್ಯಕ್ತಿಗಳನ್ನು ಅತಿಥಿಗಳನ್ನಾಗಿ ಆಹ್ವಾನಿಸುತ್ತದೆ. ಗಣರಾಜ್ಯೋತ್ಸವದಂದು ನವದೆಹಲಿಯ ಇಂಡಿಯಾ ಗೇಟ್ನಲ್ಲಿ ಭಾರತದ ರಾಷ್ಟ್ರಪತಿಗಳಿಂದ ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತದೆ. ನವದೆಹಲಿಯಲ್ಲಿ ರಾಜ್ಪಥ್ ನಡೆಯುತ್ತದೆ. ಭಾರತದ ರಾಷ್ಟ್ರೀಯ ಸೇನೆಯನ್ನು ಒಳಗೊಂಡ ಪರೇಡ್, ರಾಜ್ಯಗಳ ಸಾಂಸ್ಕೃತಿಕ ಮೆರಗನ್ನು ಸಾರುವ ಸ್ತಬ್ಧ ಚಿತ್ರಗಳ ಆಕರ್ಷಣೆಯ ಕೇಂದ್ರ ಬಿಂದುವಾಗಿರುತ್ತದೆ. ಈ ವಿಶೇಷ ದಿನದಂದು ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಹುತಾತ್ಮರಿಗೆ ಗೌರವ ಸಲ್ಲಿಸಲಾಗುತ್ತದೆ.