ಬೆಳಗಾವಿ : ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮ ಮಂಡಳಿ ಮಾದರಿಯಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ ಮಾಡುವಂತೆ ಶಾಸಕ ಲಕ್ಷ್ಮಣ ಸವದಿ ಆಗ್ರಹಿಸಿದ್ದಾರೆ.
ಅಥಣಿಯಲ್ಲಿ ನಡೆದ 76ನೇ ಗಣರಾಜ್ಯೋತ್ಸವ ಆಚರಣೆ ವೇದಿಕೆಯಲ್ಲಿ ಭಾಷಣದ ವೇಳೆ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಮಾಡಿ 5 ಸಾವಿರ ಕೋಟಿ ಹಣ ಮೀಸಲಿಡಬೇಕು. ಪ್ರತಿ ಜಿಲ್ಲೆಗೆ ವಿಶೇಷ ಅನುದಾನ ನೀಡಬೇಕು. ಈಗಾಗಲೇ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದೇವೆ. ಬಜೆಟ್ ಮಂಡನೆ ಸಮಯದಲ್ಲಿ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು ಎಂದರು.