ರಾಮನಗರ: ರಾಮನಗರ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 76ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಾರಿಗೆ, ಮುಜರಾಯಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.
ಕಿತ್ತೂರು ಕರ್ನಾಟಕ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆಗೆ ಲಕ್ಷ್ಮಣ ಸವದಿ ಒತ್ತಾಯ
ಶಾಸಕರಾದ ಇಕ್ಬಾಲ್ ಹುಸೇನ್, ನಗರಸಭೆ ಅಧ್ಯಕ್ಷರಾದ ಕೆ. ಶೇಷಾದ್ರಿ (ಶಶಿ), ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.