ಬೆಂಗಳೂರು:- ಬೀದಿ ಬದಿ ವ್ಯಾಪಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನ ನೀಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಜ್ಜಾಗಿದೆ. ಬಿಬಿಎಂಪಿ ವ್ಯಾಪ್ತಿಯ 10 ಸಾವಿರ ಬೀದಿಬದಿ ವ್ಯಾಪಾರಿಗಳಿಗೆ ಇ-ಸಂತೆ ಹೆಸರಲ್ಲಿ ಬರೋಬ್ಬರಿ 40 ಕೋಟಿ ರೂಪಾಯಿ ವೆಚ್ಚದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನ ವಿತರಿಸಲು ಸಜ್ಜಾಗಿದೆ.
Rain Alert: ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಎಲ್ಲೆಲ್ಲಿ, ಯಾವಾಗ?
ಆದರೆ, ಪಾಲಿಕೆಯ ಈ ಪ್ಲಾನ್ಗೆ ಸ್ವತಃ ಬೀದಿ ಬದಿ ವ್ಯಾಪಾರಿಗಳೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋಟಿ ಕೋಟಿ ಹಣ ಖರ್ಚು ಮಾಡಿ ವಾಹನಗಳನ್ನು ನೀಡುತ್ತಿರುವುದಕ್ಕೆ ಖುಷಿ ಇದೆ. ಹಾಗೇ ಇತರೆ ಸಮಸ್ಯೆಗಳನ್ನೂ ಬಗೆಹರಿಸಿ ಎಂದು ಆಗ್ರಹಿಸುತ್ತಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ, ಕೆ.ಆರ್. ಮಾರುಕಟ್ಟೆ ಸೇರಿದಂತೆ ಹಲವು ಏರಿಯಾಗಳಲ್ಲಿ ಬೀದಿಬದಿ ವ್ಯಾಪಾರಿಗಳು ಬದುಕು ಕಟ್ಟಿಕೊಂಡಿದ್ದಾರೆ. ಫುಟ್ಪಾತ್ಗಳ ಮೇಲೆ, ತಳ್ಳುವಗಾಡಿಗಳಲ್ಲಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ಇದೀಗ ಪಾಲಿಕೆ ಹೈಟೆಕ್ ಸೌಕರ್ಯ ನೀಡಲು ಹೊರಟಿದೆ. ಸದ್ಯ ಬೀದಿ ಬದಿ ವ್ಯಾಪಾರಿಗಳ ಸರ್ವೆ ನಡೆಸಿರುವ ಪಾಲಿಕೆ, ಈಗ ಆಯ್ದ ಬೀದಿ ಬದಿ ವ್ಯಾಪಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ನೀಡಲು ತಯಾರಿ ನಡೆಸಿದೆ.
ಈ ಪ್ಲಾನ್ಗೆ ಬಿಬಿಎಂಪಿಯ ಬರೋಬ್ಬರಿ 40 ಕೋಟಿ ರೂಪಾಯಿ ಮೀಸಲಿಟ್ಟಿದೆ. ರಾಜಧಾನಿಯ ಎಲ್ಲ ವಲಯಗಳಿಂದ ಆಯ್ದ ಬೀದಿಬದಿ ವ್ಯಾಪಾರಿಗಳಿಗೆ ಎಲೆಕ್ಟ್ರಾನಿಕ್ ವಾಹನಗಳನ್ನು ವಿತರಿಸಲು ಬಿಬಿಎಂಪಿ ತಯಾರಿ ನಡೆಸಿದೆ. ವ್ಯಾಪಾರಿಗಳಿಂದ ಆರಂಭದಲ್ಲೇ ಅಪಸ್ವರ ಕೇಳಿಬಂದಿದೆ.