ಬೆಂಗಳೂರು: ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಅನ್ನೋದ್ರಲ್ಲಿ ನನ್ನ ನಂಬಿಕೆ ಎಂದು ಮಲ್ಲಿಕಾರ್ಜುನ ಖರ್ಗೆ ಮಾತನ್ನ ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡರು. ವಿವಾದದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕುಂಭ ಸ್ನಾನದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿರೋ ಬಗ್ಗೆ ಅವರನ್ನೇ ಕೇಳಿ. ನನ್ನ ಅಭಿಪ್ರಾಯ ಕೂಡಾ ಅಷ್ಟೆ. ನಮ್ಮ ಸಂಪ್ರದಾಯ ಇದು ಅಷ್ಟೆ ಎಂದು ಸಿಎಂ ಹೇಳಿದರು.
ಕುಂಭಮೇಳದಲ್ಲಿ ಸ್ನಾನ ಮಾಡೋರು, ಗಂಗೆಯಲ್ಲಿ ಸ್ನಾನ ಮಾಡೋದು ಪಾಪ ಪರಿಹಾರ ಆಗುತ್ತೆ ಅಂತ ನಂಬಿಕೆ ಇದೆ. ಆದರೆ ನಾವೆಲ್ಲ ಬಸವಣ್ಣನವರ ಅನುಯಾಯಿಗಳು. ಪಾಪ, ಪುಣ್ಯ ಎಲ್ಲಾ ಹೆಂಗೆ? ಅಯ್ಯಾ ಎಂದರೆ ಸ್ವರ್ಗ… ಎಲವೋ ಎಂದರೆ ನರಕ ಅನ್ನೋದ್ರಲ್ಲಿ ನಂಬಿಕೆ ಇಟ್ಟುಕೊಂಡು ಇದ್ದೇವೆ ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಮಾತನ್ನ ಸಮರ್ಥನೆ ಮಾಡಿಕೊಂಡರು.
Google Search: ಗೂಗಲ್ʼನಲ್ಲಿ ಅಪ್ಪಿತಪ್ಪಿಯೂ ಈ ವಿಷಯಗಳನ್ನು ಸರ್ಚ್ ಮಾಡಬೇಡಿ…! ಜೈಲಿಗೆ ಹೋಗೋದು ಗ್ಯಾರಂಟಿ
ಇನ್ನೂ ಇಡಿ ನೋಟಿಸ್ ರಾಜಕೀಯ ಪ್ರೇರಿತನಾ ಎಂಬ ಪ್ರಶ್ನೆಗೆ ಉತ್ತರಿದ ಅವರು, ಇಡಿ ನೋಟಿಸ್ ರಾಜಕೀಯ ಪ್ರೇರಿತವಲ್ಲದೇ ಇನ್ನೇನು? ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದರು. ಇನ್ನೂ ಮುಡಾ ಕೇಸ್ ಸಿಬಿಐಗೆ ತನಿಖೆ ಕೊಡುವ ಬಗ್ಗೆ ಆತಂಕ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನ್ಯಾಯಾಧೀಶರು ಏನು ಮಾಡುತ್ತಾರೆ ಎಂದು ಗೊತ್ತಿಲ್ಲ. ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದಾರೆ. ನನಗೆ ಯಾಕೆ ಆತಂಕ ಆಗುತ್ತದೆ. ನನಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತೆ ಎಂದು ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.