ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ಗಳಿಂದ ಸಾವು ಸಂಭವಿಸುತ್ತಿರುವ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ. ಇದೀಗ ಮತ್ತೆ ಕಿಲ್ಲರ್ ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ ಸಂಭವಿಸಿದೆ.
ಸಿಗ್ನಲ್ ಬಿಡುತ್ತಿದ್ದಂತೆ ಬಸ್ ಹತ್ತಲು ಹೋಗಿ ಮಹಿಳೆ ಸಾವನ್ನಪ್ಪಿರುವ ಘಟನೆ ನಗರದ ದೇವೇಗೌಡ ಪೆಟ್ರೋಲ್ ಬಂಕ್ ಸಿಗ್ನಲ್ನಲ್ಲಿ ಇಂದು ನಡೆದಿದೆ.
CISF Recruitment 2025: ಕೈಗಾರಿಕಾ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ..! ವೇತನ 69 ಸಾವಿರ ರೂ
ಮಹಿಳೆ ಸಿಗ್ನಲ್ ಬಿಡುತ್ತಿದ್ದಂತೆ ಬಸ್ ಹತ್ತಲು ಓಡಿದ ವೇಳೆ ಎಡವಿ ಬಿಎಂಟಿಸಿ ಬಸ್ ಹಿಂಬದಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.