ಬೆಂಗಳೂರು:- ಕುಂಭಮೇಳದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರ ಕನ್ನಡಿಗರ ನೆರವಿಗೆ ಸಹಾಯವಾಣಿಯನ್ನು ಆರಂಭಿಸಿದೆ.
ನಿಮ್ಮ ಮನೆಯಲ್ಲೂ ಫ್ರಿಡ್ಜ್ ಉಂಟಾ!? ಹಾಗಿದ್ರೆ ಈ ತಪ್ಪುಗಳನ್ನು ಮಾಡ್ಬೇಡಿ!
.ಮಹಾ ಕುಂಭಮೇಳಕ್ಕೆ ತೆರಳಿರುವ ನಿಮ್ಮ ಕುಟುಂಬಸ್ಥರು ಸಂಪರ್ಕಕ್ಕೆ ಸಿಗುತ್ತಿಲ್ಲವಾದರೆ, 080-22340676 ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದ್ದು, ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಮೌನಿ ಅಮಾವಾಸ್ಯೆ ಹಿನ್ನೆಲೆ ಬುಧವಾರ ಬೆಳಿಗ್ಗೆ ಕೋಟ್ಯಂತರ ಭಕ್ತರು ಪವಿತ್ರ ಸ್ನಾನ ಮಾಡಲು ಪ್ರಯಾಗ್ರಾಜ್ಗೆ ಬರುತ್ತಿದ್ದರು. ಈ ವೇಳೆ ನೂಕು ನುಗ್ಗಲು ಸಂಭವಿಸಿ ಕಾಲ್ತುಳಿತ ಉಂಟಾದ ಪರಿಣಾಮ 30ಕ್ಕೂ ಅಧಿಕ ಭಕ್ತರು ಸಾವನ್ನಪ್ಪಿದ್ದಾರೆ. ಈ ಪೈಕಿ ಕರ್ನಾಟಕದವರು ನಾಲ್ವರು ಸಾವನ್ನಪ್ಪಿದ್ದಾರೆ.