ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಫೆಬ್ರವರಿ 1 ರಿಂದ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾರ್ ನಲ್ಲಿ ಆ್ಯಸಿಡ್ ಕುಡಿದು ವ್ಯಕ್ತಿ ಸಾವು: ಬಿಜೆಪಿ ಮುಖಂಡನ ವಿರುದ್ಧ ದಾಖಲಾಯ್ತು ದೂರು!
ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಇದೀಗ ಮಳೆ ಮಾರುತ ಸೃಷ್ಟಿ ಆಗಿದ್ದು, ಪರಿಣಾಮ ರಾಜ್ಯದಲ್ಲಿ ಫೆಬ್ರವರಿ 2ರಿಂದ ಮತ್ತೆ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬೆಳಗಾವಿಯಲ್ಲಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮಗರ ಸೇರಿಂದತೆ ಹಲವು ಭಾಗಗಳಲ್ಲಿ ಫೆಬ್ರವರಿ 4ರ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಕಡೆಗಳಲ್ಲಿ ಒಳಹವೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.