ಪ್ರಯಾಗ್ರಾಜ್:- ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪರಿಷತ್ ಶಾಸಕ ಟಿಎ ಶರವಣ ಅವರು ಸಂತಾಪ ಸೂಚಿಸಿದ್ದಾರೆ.
ಘಟನೆ ಸಂಬಂಧ X (ಟ್ವೀಟ್) ಮಾಡಿರುವ ಟಿಎ ಶರವಣ, ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಮನಸ್ಸಿಗೆ ಅತೀವ ನೋವುಂಟುಮಾಡಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬ ಹಾಗೂ ಸಂಬಂಧಿಕರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಹಾಗೂ ಗಾಯಗೊಂಡಿರುವವರು ದೇವರ ಕೃಪೆಯಿಂದ ಶೀಘ್ರ ಗುಣಮುಖರಾಗಿ ಬರಲಿ ಎಂದು ಮನಃಪೂರ್ವಕವಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಘಟನೆ ಹಿನ್ನೆಲೆ:-
ಮೌನಿ ಅಮಾವಾಸ್ಯೆ ಹಿನ್ನೆಲೆ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವ ಸಲುವಾಗಿ ಭಕ್ತಸಾಗರವೇ ಹರಿದು ಬಂದಿತ್ತು. ಈ ವೇಳೆ ಕಾಲ್ತುಳಿತ ಉಂಟಾಗಿ ಸಾಕಷ್ಟು ಮಂದಿ ಸಾವನ್ನಪ್ಪಿದರು.
ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ 144 ವರ್ಷಗಳಿಗೆ ಒಮ್ಮೆ ಈ ಮಹಾ ಕುಂಭಮೇಳ ನಡೆಯುತ್ತದೆ. ಈ ಬಾರಿಯೂ ಮಹಾ ಕುಂಭಮೇಳಕ್ಕೆ ಕೋಟ್ಯಾಂತರ ಜನ ಸೇರಿದ್ದಾರೆ. ಮಂಗಳವಾರ ತಡರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಈ ದುರಂತದಲ್ಲಿ ಕರ್ನಾಟಕದ ಹಲವರು ದಾರುಣ ಸಾವನ್ನಪ್ಪಿರುವುದು ವರದಿಯಾಗಿದೆ.