ಗದಗ : 2019ರಲ್ಲಿ ನಡೆದಿದ್ದ ಮರ್ಯಾದೆ ಹತ್ಯೆ ಪ್ರಕರಣ ಸಾಬೀತಾಗಿದ್ದು, ನಾಲ್ವರು ಅಪರಾಧಿಗಳಿಗೆ ಮರಣದಂಡನೆ ನೀಡಿ ಗದಗ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ಮರ್ಯಾದ ಹತ್ಯೆ ಪ್ರಕರಣವೊಂದು ನಡೆದಿತ್ತು. ಇದೀಗ ನಾಲ್ವರು ಆರೋಪಿಗಳಾದ ಶಿವಪ್ಪ ರಾಠೋಡ, ರವಿಕುಮಾರ ರಾಠೋಡ, ರಮೇಶ ರಾಠೋಡ ಹಾಗೂ ಸಾರಿಗೆ ಇಲಾಖೆ ಚಾಲಕ ಪರಶುರಾಮ ರಾಠೋಡಗೆ ಮರಣ ದಂಡನೆ ಶಿಕ್ಷೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ
ಯೋಗೀಶ್ ಗೌಡ ಹತ್ಯೆ ಪ್ರಕರಣ ; ವಿನಯ್ ಕುಲಕರ್ಣಿ ವಿರುದ್ದದ ಸಾಕ್ಷಿ ನಾಶ ಪ್ರಕರಣ ರದ್ದು
ಲಕ್ಕಲಕಟ್ಟಿ ಗ್ರಾಮದ ರಮೇಶ ಮಾದರ ಮತ್ತು ಗಂಗಮ್ಮ ಮಾದರ ಪ್ರೀತಿಸಿ ಮದುವೆಯಾಗಿದ್ದರು. ಹೀಗೆ ಪ್ರೀತಿಸಿ ಮದುವೆಯಾಗಿದ್ದ ಜೋಡಿಗೆ ನಡುಬೀದಿಯಲ್ಲಿಯೇ ಕಲ್ಲು ದೊಣ್ಣೆಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಕುಟುಂಬಸ್ಥರ ವಿರೋಧ ನಡುವೆ ಗಂಗಮ್ಮ ಪ್ರೀತಿಸಿ ಅಂತರಜಾತಿ ವಿವಾಹ ಆಗಿದ್ದಕ್ಕೆ ಗಂಗಮ್ಮ ಸಂಬಂಧಿಕರು ಕೊಲೆ ಮಾಡಿದ್ದರು. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐಪಿಸಿ 427, 449, 302, 506(2) ಅಡಿಯಲ್ಲಿ ನ್ಯಾಯಾಲಕ್ಕೆ ಪೊಲೀಸರು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ರು. ವಾದ ಪ್ರತಿವಾದ ಆಲಿಸಿದ್ದ ಜಿಲ್ಲಾ ನ್ಯಾಯಾಲಯವು ನಾಲ್ವರಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ.