ಬೆಂಗಳೂರು: ರಾಜ್ಯಾದ್ಯಂತ ಇಂದು ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳು ಹಾಗೂ ಅವರ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬಾಗಲಕೋಟೆ, ರಾಯಚೂರು, ಬೆಳಗಾವಿ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳು, ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಒ, ರಾಯಚೂರಿನಲ್ಲಿ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
Swollen Feet: ಪದೇ ಪದೇ ಪಾದಗಳು ಊದಿಕೊಳ್ಳುತ್ತವೆಯೇ..? ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದುಗಳು
ಬೆಂಗಳೂರಿನಲ್ಲಿ ಕೂಡ ಬಿಬಿಎಂಪಿ ಎಇಇ ಮಾಧವ ರಾವ್ ಮನೆ ಮೇಲೆ ದಾಳಿ ನಡೆದಿದೆ. ಎಂಜಿನಿಯರಿಂಗ್ ವಿಭಾಗದ ಎಇಇ ಮಾಧವರಾವ್ ಮನೆಗೆ ತಲುಪಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ಬೆಳಗಾವಿ ನಗರದ ಅನಗೋಳದಲ್ಲಿರುವ, ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟರ್ ಸಚಿನ್ ಮಂಡೇದ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮನೆ, ಕಚೇರಿ ಸೇರಿ 3 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.
ಹಾರೂಗೇರಿ ವೆಟರ್ನರಿ ಇನ್ಸ್ಪೆಕ್ಟರ್ ಸಂಜಯ್ ಮನೆ ಮೇಲೂ ದಾಳಿ ನಡೆದಿದೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.