ಬೆಂಗಳೂರು: ಹೆಸರಘಟ್ಟ ಕೆರೆ ಭವಿಷ್ಯದಲ್ಲೂ ರಾಜಧಾನಿಯ ಪ್ರಮುಖ ಜಲ ಮೂಲವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 133 ಪ್ರಭೇದದ ಪಕ್ಷಿಗಳು, 40 ಸ್ಥಳೀಯ ಹಾಗೂ ನೈಸರ್ಗಿಕ ಸಸ್ಯಗಳು ಮತ್ತು ಚಿರತೆ, ತೋಳ, ಕಾಡುಪಾಪ ಮೊದಲಾದ ವನ್ಯಜೀವಿಗಳಿಗೆ ಆಶ್ರಯತಾಣವಾದ ಈ ಕಾನನ ಮತ್ತು ಹುಲ್ಲುಗಾವಲು ಪ್ರದೇಶದ ಸಂರಕ್ಷಣೆ ನಮ್ಮ ಆದ್ಯತೆಯ ವಿಷಯವಾಗಿತ್ತು.
ಈ ಪ್ರದೇಶದಲ್ಲಿ ಹೆಸರಘಟ್ಟ ಕೆರೆ, ಬ್ಯಾತ ಕೆರೆ ಸೇರಿದಂತೆ ಹಲವು ಕೆರೆಗಳಿದ್ದು ವಲಸೆ ಹಕ್ಕಿಗಳ ಸಂತಾನೋತ್ಪತ್ತಿಯ ತಾಣವೂ ಆಗಿದೆ. ಬೆಂಗಳೂರು ನಗರದ ಜನತೆಯ ನೀರಿನ ಅವಶ್ಯಕತೆ ಪೂರೈಸುತ್ತಿದ್ದ ಹೆಸರಘಟ್ಟ ಕೆರೆ ಭವಿಷ್ಯದಲ್ಲೂ ರಾಜಧಾನಿಯ ಪ್ರಮುಖ ಜಲ ಮೂಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ರಾಜ್ಯದಲ್ಲಿ ಅಣ್ಣನನ್ನೇ ತಂಗಿ ಮದ್ವೆ ಆಗ್ತಾಳೆ..! ಉಲ್ಲಂಘಿಸಿದ್ರೆ ಕಠಿಣ ಶಿಕ್ಷೆ – ಎಲ್ಲಿ ವಿಚಿತ್ರ ಸಂಪ್ರದಾಯ?
ಬೆಂಗಳೂರು ನಗರ ಜಿಲ್ಲೆ ಯಲಹಂಕ ಉತ್ತರ ತಾಲೂಕಿನ ಒಟ್ಟು 5678.32 ಎಕರೆ ಪ್ರದೇಶವನ್ನು ವನ್ಯಜೀವಿ ಸಂರಕ್ಷಣಾ ಅಧಿನಿಯಮ 1972ರ ಕಲಂ 36(ಎ) ಅನ್ವಯ ‘ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು’ ಎಂದು ಘೋಷಿಸಲಾಗಿದ್ದು,
ಈಗ ಇಡೀ ಪ್ರದೇಶ ಸುರಕ್ಷಿತವಾಗಿರಲಿದೆ. ಕಳೆದ ಅ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿಯ ಸಭೆಯಲ್ಲಿ ‘ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು’ ಎಂದು ಘೋಷಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿತ್ತು. ಗುರುವಾರ ಸಚಿವ ಸಂಪುಟ ಸಭೆ ಇದಕ್ಕೆ ಅಧಿಕೃತ ಮುದ್ರೆ ಒತ್ತಿದೆ ಎಂದು ತಿಳಿಸಿದ್ದಾರೆ.