ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಹಣಕಾಸು ಮಂತ್ರಿಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಇದುವರೆಗೆ 7 ಬಜೆಟ್ ಮಂಡಿಸಿದ್ದಾರೆ. ಇಂದು 8ನೇ ಬಜೆಟ್ ಮಂಡಿಸಿ ದಾಖಲೆ ಬರೆಯಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನದಲ್ಲಿದ್ದಾರೆ. ಬಜೆಟ್ ಮಂಡಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನುಮತಿ ಪಡೆದಿದ್ದಾರೆ.
ಗ್ರಾಹಕರೇ ಗಮನಿಸಿ: ಇಂದಿನಿಂದ UPI, LPG ಸಿಲಿಂಡರ್, ವಾಹನ ನಿಯಮಗಳಲ್ಲಿ ಆಗಲಿದೆ ಮಹತ್ವದ ಬದಲಾವಣೆಗಳು!
ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಮೊಸರು-ಸಕ್ಕರೆ ತಿನ್ನಿಸಿದ್ದಾರೆ. ಕೇಂದ್ರ ಬಜೆಟ್ ಮಂಡನೆಗೆ ರಾಷ್ಟ್ರಪತಿ ಅನುಮತಿ ಪಡೆದ ನಿರ್ಮಲಾ ಸೀತಾರಾಮನ್ ಸಂಸತ್ತಿಗೆ ಆಗಮಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಬಜೆಟ್ ಮಂಡನೆಯಾಗಲಿದೆ.