ನವದೆಹಲಿ: ಬಜೆಟ್ ಮಂಡನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಶುರು ಮಾಡಿದ್ದಾರೆ. ಸದನದಲ್ಲಿ ವಿರೋಧ ಪಕ್ಷ ನಾಯಕರು ಗದ್ದಲ ಎಬ್ಬಿಸಿದ್ದಾರೆ. ದೇಶ ಎಂದರೆ ಮಣ್ಣು ಅಲ್ಲ, ದೇಶ ಎಂದರೆ ಜನರು. ಖ್ಯಾತ ಕವಿಯ ಹೇಳಿಕೆಯಂತೆ ನಾವು ಕೆಲಸ ಮಾಡುತ್ತಿದ್ದೇವೆ. ಈ ಬಜೆಟ್ನಲ್ಲಿ ಬಡತನ, ಮಹಿಳೆ, ಕೃಷಿ, ಯುವ, ರಫ್ತು ಪ್ರೊತ್ಸಾಹ, ಹೂಡಿಕೆ, ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದೆ ಎಂದಿದ್ದಾರೆ,
ಫೆ.1 ರಂದು ಸೀತಾರಾಮನ್ ಅವರು 8ನೇ ಬಜೆಟ್ ಮಂಡಿಸುತ್ತಿರುವುದು ಭಾರತದ ಸಂಸದೀಯ ಇತಿಹಾಸದಲ್ಲಿ ಹೊಸ ದಾಖಲೆಯಾಗಲಿದೆ. ಸಂಸತ್ತಿನ ಅಧಿಕೃತ ಚಾನೆಲ್ಗಳಲ್ಲಿ ಭಾಷಣವನ್ನು ಪ್ರಸಾರ ಮಾಡಲಾಗುತ್ತದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ಎಂಟನೇ ಬಜೆಟ್ ಇದಾಗಿದೆ. ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ.
ಗ್ರಾಹಕರೇ ಗಮನಿಸಿ: ಇಂದಿನಿಂದ UPI, LPG ಸಿಲಿಂಡರ್, ವಾಹನ ನಿಯಮಗಳಲ್ಲಿ ಆಗಲಿದೆ ಮಹತ್ವದ ಬದಲಾವಣೆಗಳು!
ಅವರು ಒಟ್ಟು 10 ಬಾರಿ ಬಜೆಟ್ ಮಂಡಿಸಿದ್ದರು. ಮೊರಾರ್ಜಿ ದೇಸಾಯಿ ಹಣಕಾಸು ಸಚಿವರಾಗಿದ್ದಾಗ, 1959ರಿಂದ 1964ರವರೆಗೆ ಸತತ ಆರು ಬಾರಿ ಮತ್ತು 1967ರಿಂದ 1969ರ ಅವಧಿಯಲ್ಲಿ ನಾಲ್ಕು ಬಾರಿ ಬಜೆಟ್ ಮಂಡಿಸಿದ್ದರು. ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಒಂಬತ್ತು ಬಾರಿ ಬಜೆಟ್ ಮಂಡಿಸಿದ್ದರು.
ಹಾಗೆಯೇ ಪ್ರಣಬ್ ಮುಖರ್ಜಿ ಭಾರತದ ಹಣಕಾಸು ಸಚಿವರಾಗಿದ್ದಾಗ ಎಂಟು ಬಾರಿ ಬಜೆಟ್ ಮಂಡಿಸಿದ್ದರು. ಹಣದುಬ್ಬರ ಹೊಡೆತಕ್ಕೆ ಸಿಕ್ಕಿರುವ ಮಧ್ಯಮ ವರ್ಗವನ್ನು ರಕ್ಷಿಸುವ ಸಲುವಾಗಿ ತೆರಿಗೆ ದರ ಕಡಿತ ಅಥವಾ ತೆರಿಗೆ ಸ್ತರದಲ್ಲಿ ಬದಲಾವಣೆ ಸಾಧ್ಯತೆ ದಟ್ಟವಾಗಿದೆ.