ನವದೆಹಲಿ:- ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಪೂವರ್ ಲೇಡಿ’ ಎಂದ ಸೋನಿಯಾ ಗಾಂಧಿ ವಿರುದ್ಧ ಮುಜಾಫರ್ ಪುರದಲ್ಲಿ ಕೇಸ್ ದಾಖಲಾಗಿದೆ.
ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್: ‘ಕಾವೇರಿ’ ನಿವಾಸಕ್ಕೆ ತೆರಳಿದ ಸಿಎಂ!
ಫೆಬ್ರವರಿ 10 ರಂದು ಈ ಪ್ರಕರಣದ ವಿಚಾರಣೆ ನಡೆಯಲಿದೆ. ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಬಳಿಕ ಪ್ರತಿಕ್ರಿಯೆ ನೀಡಿದ ಸೋನಿಯಾ ಗಾಂಧಿ ಈ ಹೇಳಿಕೆ ನೀಡಿದ್ದರು ಎನ್ನಲಾಗಿದೆ.
ಅರ್ಜಿದಾರರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸಹ ಆರೋಪಿಗಳೆಂದು ಹೆಸರಿಸಿದ್ದಾರೆ ಮತ್ತು ಅವರ ವಿರುದ್ಧವೂ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ದ್ರೌಪದಿ ಮುರ್ಮು ಅವರನ್ನು ಸೋನಿಯಾ ಗಾಂಧಿ ಅವಮಾನಿಸಿದ್ದಾರೆ ಎಂದು ಅರ್ಜಿದಾರ ಸುಧೀರ್ ಹೇಳಿದ್ದಾರೆ. ಬಜೆಟ್ ಅಧಿವೇಶನದ ವೇಳೆ ರಾಷ್ಟ್ರಪತಿ ಭಾಷಣದ ನಂತರ ಸೋನಿಯಾ ಗಾಂಧಿ ಅವರು ನೀಡಿದ ಹೇಳಿಕೆ ಅತ್ಯಂತ ಆಕ್ಷೇಪಾರ್ಹವಾಗಿದೆ. ರಾಷ್ಟ್ರಪತಿ ಮಹಿಳೆಯಾಗಿದ್ದಾರೆ ಮತ್ತು ಬುಡಕಟ್ಟು ಸಮುದಾಯದಿಂದ ಬಂದವರು. ಅವರ ವಿರುದ್ಧ ಈ ಹೇಳಿಕೆ ಆಕ್ಷೇಪಾರ್ಹ ಎಂದು ಓಜಾ ಪ್ರತಿಪಾದಿಸಿದ್ದಾರೆ.