ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಆರಂಭವಾಗಲಿದೆ. ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ಎಂಟು ತಂಡಗಳಲ್ಲಿ ಈ ಬಾರಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಫೈನಲ್ ಆಡಲಿವೆ. ಎಂಟು ತಂಡಗಳಲ್ಲಿ ಈ ಬಾರಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಫೈನಲ್ ಆಡಲಿವೆ ಎಂದು ಆಸೀಸ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಭವಿಷ್ಯ ನುಡಿದಿದ್ದಾರೆ.
ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಕಂದಕಕ್ಕೆ ಉರುಳಿದ ಬಸ್ ; ಏಳು ಜನರ ದುರ್ಮರಣ
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಕಳೆದ ಮೂರು ಐಸಿಸಿ ಟೂರ್ನಿಗಳಲ್ಲಿ 2 ಬಾರಿ ಫೈನಲ್ ಆಡಿವೆ. 2023ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್, 2023 ರ ಏಕದಿನ ವಿಶ್ವಕಪ್ನಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿರುವುದರಿಂದ ಈ ಬಾರಿ ಕೂಡ ಉಭಯ ತಂಡಗಳಿಂದ ಹಣಾಹಣಿಯನ್ನು ನಿರೀಕ್ಷಿಸಬಹುದು ಎಂದು ಪಾಂಟಿಂಗ್ ಹೇಳಿದ್ದಾರೆ.
ಹೀಗಾಗಿ 2023ರ ಏಕದಿನ ವಿಶ್ವಕಪ್ ಫೈನಲ್ನಂತೆ ಈ ಬಾರಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುವುದು ಬಹುತೇಕ ಖಚಿತ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.