ಇಸ್ಲಾಮಾಬಾದ್: ಬಲೂಚಿಸ್ತಾನದಲ್ಲಿ ಪ್ರತ್ಯೇಕತಾವಾದಿಗಳು ಪಾಕಿಸ್ತಾನ ಸೇನೆಗೆ ದೊಡ್ಡ ಆಘಾತ ನೀಡಿದ್ದಾರೆ. ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 41 ಮಂದಿ ಪಾಕಿಸ್ತಾನ ಸೈನಿಕರನ್ನು ಹತ್ಯೆ ಮಾಡಿದ್ದಾರೆ.
ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಸೇನೆ ಮತ್ತು ಬಲೂಚಿಸ್ತಾನ ಪ್ರತ್ಯೇಕತಾವಾದಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಪರಿಣಾಮ ಕೇವಲ 24 ಗಂಟೆಗಳ ಅವಧಿಯಲ್ಲಿ ಪಾಕಿಸ್ತಾನದ ಸೈನಿಕರು ಸೇರಿ 41 ಮಂದಿಯನ್ನು ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ ಆದರೆ ಮೃತರ ಸಂಖ್ಯೆಯನ್ನು ಅಲ್ಲಗಳೆದಿರುವ ಪಾಕಿಸ್ತಾನ ಸೇನೆ ಸತವರೆಲ್ಲರೂ ಪಾಕಿಸ್ತಾನ ಸೈನಿಕರಲ್ಲ. 18 ಭದ್ರತಾ ಸಿಬ್ಬಂದಿ ಮತ್ತು 23 ಪಾಕ್ ಮೂಲದ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.
ಇನ್ನು ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಸೇನೆ ಅಕ್ಷರಶಃ ತನ್ನ ನಿಯಂತ್ರಣ ಕಳೆದುಕೊಳ್ಳುತ್ತಿದ್ದು, ಪ್ರತ್ಯೇಕತಾವಾದಿಗಳ ಕೈ ಮೇಲಾಗುತ್ತಿದೆ. ಇದಕ್ಕೆ ಕಳೆದ 24 ಗಂಟೆಗಳಲ್ಲಿ 41 ಸೈನಿಕರು ಸಾವನ್ನಪ್ಪಿರುವುದೇ ಸಾಕ್ಷಿ ಎನ್ನಲಾಗುತ್ತಿದೆ. ಪಾಕ್ ಸೇನೆಯ ಮಾಹಿತಿ ಅನ್ವಯವೇ ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಎರಡೂ ಕಡೆಯ ನಡುವಿನ ಘರ್ಷಣೆಯಲ್ಲಿ ಕನಿಷ್ಠ 18 ಭದ್ರತಾ ಸಿಬ್ಬಂದಿ ಮತ್ತು 23 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ತೊಂದರೆಗೊಳಗಾದ ಬಲೂಚಿಸ್ತಾನದ ವಿವಿಧ ಪ್ರದೇಶಗಳಲ್ಲಿ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಸೇನೆ ತಿಳಿಸಿದೆ.
ಅಂತೆಯೇ ಶನಿವಾರ ಹರ್ನೈ ಜಿಲ್ಲೆಯಲ್ಲಿ ನಡೆದ ಅಂತಹ ಒಂದು ಕಾರ್ಯಾಚರಣೆಯಲ್ಲಿ, ರಾಷ್ಟ್ರೀಯ ಪಡೆಗಳು ಭಯೋತ್ಪಾದಕರನ್ನು ಪರಿಣಾಮಕಾರಿಯಾಗಿ ಎದುರಿಸಿದವು, 11 ಉಗ್ರರನ್ನು ಕೊಂದು ಹಲವಾರು ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿದವು. ಶುಕ್ರವಾರ ರಾತ್ರಿ, 12 ಭಯೋತ್ಪಾದಕರು ಕೊಲ್ಲಲ್ಪಟ್ಟರು, ಭದ್ರತಾ ಪಡೆಗಳು ಕಲಾತ್ನ ಮಂಗೋಚರ್ ಪ್ರದೇಶದಲ್ಲಿ ರಸ್ತೆ ತಡೆಗಳನ್ನು ಸ್ಥಾಪಿಸಲು ಉಗ್ರಗಾಮಿಗಳು ಮಾಡಿದ ಪ್ರಯತ್ನವನ್ನು ಯಶಸ್ವಿಯಾಗಿ ವಿಫಲಗೊಳಿಸಿದವು ಎಂದು ಹೇಳಿದೆ.