ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ನಗರದ ಜ್ಞಾನಭಾರತಿ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ. ಪಾವನ ಹೆಚ್ಎನ್ (23) ಮೃತ ದುರ್ಧೈವಿಯಾಗಿದ್ದು, ಮೃತ ವಿದ್ಯಾರ್ಥಿನಿ ಕನ್ನಡ ಅಧ್ಯಯನ ಕೇಂದ್ರದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಳು.
Remedies For Corns: ಕಾಲಿನಲ್ಲಿ ಉಂಟಾಗುವ ಆಣಿಗಳಿಗೆ ಇಲ್ಲಿದೆ ಮನೆಮದ್ದುಗಳು..! ಒಮ್ಮೆ ಟ್ರೈ ಮಾಡಿ
ಸೋಮವಾರ ಮದ್ಯಾಹ್ನ ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.