ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ರಾಜ್ಯದಲ್ಲಿ ಹೋರಾಟದ ಬಳಿಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಮ್ ಈಗ ದೆಹಲಿ ಮಟ್ಟಕ್ಕೆ ಅದನ್ನು ಒಯ್ಯಲು ನಿರ್ಧರಿಸಿದೆ. ಜಿಲ್ಲಾಧ್ಯಕ್ಷರ ನೇಮಕಾತಿ ಪಾರದರ್ಶಕವಾಗಿಲ್ಲ ಎಂದು ವರಿಷ್ಠರ ಗಮನಕ್ಕೆ ತರಲು ಮುಂದಾಗಿದೆ. ಈ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ತಟಸ್ಥರಿದ್ದವರು ಇದೀಗ ನಮ್ಮ ನಿಷ್ಠಾವಂತರ ಗುಂಪು ಸೇರಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲು ಹೊರಟಿದ್ದೇವೆ. ವಂಶಪಾರಂಪರಿಕ, ಕುಟುಂಬಶಾಹಿ ವಿರುದ್ಧ ನಮ್ಮ ಹೋರಾಟ ಇದೆ. ಯಡ್ಡಿಯೂರಪ್ಪ ಅವರ ಮಗನ ಕರ್ಮಕಾಂಡದ ಬಗ್ಗೆ ವಿವರಿಸಲು ಹೊರಟಿದ್ದೇವೆ ಎಂದು ಕಿಡಿಕಾರಿದರು.
Remedies For Corns: ಕಾಲಿನಲ್ಲಿ ಉಂಟಾಗುವ ಆಣಿಗಳಿಗೆ ಇಲ್ಲಿದೆ ಮನೆಮದ್ದುಗಳು..! ಒಮ್ಮೆ ಟ್ರೈ ಮಾಡಿ
ಇನ್ನೂ ಕುಟುಂಬಶಾಹಿ ರಾಜಕಾರಣ ಬಿಜೆಪಿಯಲ್ಲಿ ಕೊನೆಗೊಳ್ಳಬೇಕು. ಭ್ರಷ್ಟಾಚಾರ ಕುಟುಂಬ ಈ ರಾಜ್ಯದಿಂದ ತೊಲಗಬೇಕು. ಹಿಂದುತ್ವದ ಪರ ಇರುವ ನಾಯಕತ್ವ ಬರಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಯಾರು ಕೂಡ ಹಿಂದೂತ್ವದ ರಕ್ಷಣೆ ಮಾಡಲಿಲ್ಲ.
ಹಿಂದೂಗಳ ಕೊಲೆಯಾದರೂ ಯಾರು ಕೇಳಲಿಲ್ಲ. ಕೇವಲ ಕಠಿಣ ಕ್ರಮ ಅನ್ನೋದನ್ನು ಬಿಟ್ಟರೆ ಏನು ಮಾಡಲಿಲ್ಲ. ಅದಕ್ಕಾಗಿಯೇ ರಾಜ್ಯದಲ್ಲಿ ಬಿಜೆಪಿ ಹೀನಾಯ ಪರಿಸ್ಥಿತಿ ತಲುಪಿದೆ. ಅದಕ್ಕೆ ಕಾರಣ ಹಿಂದುತ್ವ ಕೈಬಿಟ್ಟು ರಾಜಕಾರಣ ಮಾಡಿದ್ದು. ನಮ್ಮ ಟೀಂ ಈಗ ಬಹಳ ದೊಡ್ಡದಾಗಿದೆ. ತಟಸ್ಥ ಎಂದು ಎರಡು ಕಡೆ ಆಟ ಆಡುತ್ತಿದ್ದರು. ಈಗ ಅವರಿಗೂ ಗೊತ್ತಾಗಿದೆ. ಅವರೆಲ್ಲ ನಿಷ್ಠಾವಂತರಾಗಿದ್ದಾರೆ ಎಂದರು.