ಬೆಂಗಳೂರು:- ಕರ್ನಾಟಕದಲ್ಲಿ ಚಳಿ ಮುಂದುವರೆದಿದೆ, ಮುಂದಿನ ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಕ್ರಮೇಣವಾಗಿ ಹೆಚ್ಚಾಗುವ ಸಾಧ್ಯತೆ ಇದೆ. ಅದರಂತೆ ಧಾರವಾಡ ಹಾಗೂ ಶಿವಮೊಗ್ಗದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಪ್ರಯಾಣಿಕರೇ ಗಮನಿಸಿ: ಈ 5 ದಿನಗಳು ಬೆಂಗಳೂರಲ್ಲಿ ಕ್ಯಾಬ್ ಸಿಗೋದು ಕಷ್ಟ!
ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಾದ್ಯಂತ ಚಳಿ ಮುಂದುವರೆಯಲಿದೆ.
ಧಾರವಾಡ ಹಾಗೂ ಶಿವಮೊಗ್ಗದಲ್ಲಿ 12.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಎಚ್ಎಎಲ್ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.