ಬೆಂಗಳೂರು: ಕರ್ನಾಟಕ ಜ್ಯುವೆಲರಿ ಅಸೋಸಿಯೇಶನ್ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ ಅವರ ನೇತೃತ್ವದಲ್ಲಿ ಬೃಹತ್ ಕೈಗಾರಿಕೆ ಸಚಿವರಾದ ಎಂ ಬಿ ಪಾಟೀಲ್ ಅವರನ್ನು ಭೇಟಿ ಮಾಡಲಾಯಿತು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯ 2ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಲು ರಿಯಾಯಿತಿ ದರದಲ್ಲಿ 50 ಎಕರೆ ಭೂಮಿ ಕೊಡಬೇಕೇಂದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಲಕ್ಷಾಂತರ ಜನ ಚಿನ್ನ-ಬೆಳ್ಳಿ ಕೆಲಸದಲ್ಲಿ ನಿರತರಾಗಿದ್ದಾರೆ. ಈ ವಲಯದಿಂದ ವರ್ಷಕ್ಕೆ 1 ಲಕ್ಷ ಕೋಟಿ ರೂಪಾಯಿ ಜಿಎಸ್ಟಿ ಸಂದಾಯವಾಗುತ್ತಿದೆ. ಆದರೆ, ಇದುವರೆಗೂ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸದೆ ಇರುವುದರಿಂದ ಹಿನ್ನಡೆಯಾಗಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Tulsi Plant: ನಿಮ್ಮ ಮನೆಯಲ್ಲಿ ತುಳಸಿ ಗಿಡವನ್ನು ಯಾವ ದಿಕ್ಕಿನಲ್ಲಿ ಇಟ್ಟರೆ ಒಳಿತಾಗುತ್ತೆ? ಇಲ್ಲಿದೆ ಮಾಹಿತಿ
ಮೆಗಾ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿದರೆ, 495 ಕೋಟಿ ರೂಪಾಯಿ ಹೂಡಿಕೆ ಆಗಲಿದ್ದು, 10 ಸಾವಿರ ಜನರಿಗೆ ಉದ್ಯೋಗ ಸಿಗಲಿದೆ. ಆದ್ದರಿಂದ, ಎರಡು ವರ್ಷಗಳ ಹಿಂದೆಯೇ ಬಜೆಟ್ನಲ್ಲಿ ಘೋಷಣೆ ಆಗಿರುವ ಈ ಯೋಜನೆಯನ್ನು ಕಾರ್ಯಗತಗೊಳಿಸಬೇಕು ಎಂದು ಮನವಿ ಮಾಡಿದ್ದು, ಮನವಿ ಸ್ವೀಕರಿಸಿದ ಸಚಿವರು, ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ ಯೋಜನೆ ಅನುಷ್ಠಾನವನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.