ನವದೆಹಲಿ:- ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮೋಸ ಆಗಿಲ್ಲ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕಳೆದ ವರ್ಷಕ್ಕಿಂತ 10%ರಷ್ಟು ಹೆಚ್ಚಿಗೆ ತೆರಿಗೆ ಹಂಚಿಕೆ ಮಾಡಿದೆ ಎಂದರು. 2025-26ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕಕ್ಕೆ 51,876 ಕೋಟಿ ರೂ. ತೆರಿಗೆ ಹಂಚಿಕೆ ಮಾಡಿದೆ ಎಂದಿದ್ದಾರೆ.
2014-15ರಲ್ಲಿ 24,789.78 ಕೋಟಿ ರೂ. ತೆರಿಗೆ ಹಂಚಿಕೆ ಆಗಿದ್ದರೆ, 2025-2 6ರ ಆರ್ಥಿಕ ವರ್ಷ ಇದಕ್ಕಿಂತ 108% ರಷ್ಟು (5,1876 ಕೋಟಿ ರೂ.)ಅಧಿಕ ತೆರಿಗೆ ಹಂಚಿಕೆ ಮೊತ್ತವನ್ನು ಕರ್ನಾಟಕಕ್ಕೆ ಭರಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕರ್ನಾಟಕ ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಗಿದೆ. ರಾಜ್ಯಕ್ಕೆ ಅತ್ಯಧಿಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.