ಬೆಂಗಳೂರು: ಟೀಂ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಕಾರಿಗೆ ಗೂಡ್ಸ್ ಅಟೋ ಗುದ್ದಿದ ಘಟನೆ ನಿನ್ನೆ ಸಂಜೆ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಡೆದಿದೆ. ಆದ್ರೆ ಈ ಅಪಘಾತದಲ್ಲಿ ಯಾವುದೇ ಗಾಯವಾಗಲಿ, ಪ್ರಾಣಾಪಾಯದಂತಹ ಘಟನೆಗಳು ಸಂಭವಿಸಿಲ್ಲ.
ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಾರು ಟಚ್ ಆದ ಬಳಿಕ ರಾಹುಲ್ ದ್ರಾವಿಡ್ ಕಾರಿನಿಂದ ಕೆಳಗಿಳಿದು ಕಾರನ್ನು ಪರಿಶೀಲಿಸಿದ್ದಾರೆ. ಮಾತ್ರವಲ್ಲ ಈ ಸಂದರ್ಭದಲ್ಲಿ ರಾಹುಲ್ ದ್ರಾವಿಡ್ ಹಾಗೂ ಗೂಡ್ಸ್ ಆಟೋ ಚಾಲಕನ ನಡುವೆ ಸಣ್ಣ ವಾಗ್ವಾದ ನಡೆದಿದೆ. ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ನಿಮ್ಮ ಕನಸಲ್ಲಿ ಯಾರಾದ್ರು ಮೃತಪಟ್ಟಂತೆ ಕಾಣಿಸಿಕೊಂಡ್ರೆ ಏನಾಗುತ್ತೆ..? ಇದರ ಹಿಂದಿದೆ ಸ್ಫೋಟಕ ರಹಸ್ಯ!
ದ್ರಾವಿಡ್ ಕಾರಿಗೆ ಹಿಂದೆಯಿಂದ ಗೂಡ್ಸ್ ಆಟೋ ಟಚ್ ಆಗಿದೆ. ಸಂಜೆ 6.30ರ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ದ್ರಾವಿಡ್ ಅವರು ಇಂಡಿಯನ್ ಎಕ್ಸ್ಪ್ರೆಸ್ ಸಿಗ್ನಲ್ ಕಡೆಯಿಂದ ಹೈಗ್ರೌಂಡ್ಸ್ ಕಡೆಗೆ ಹೊರಟಿದ್ದರು. ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಟ್ರಾಫಿಕ್ ಉಂಟಾಗಿತ್ತು.
ಈ ವೇಳೆ ಟ್ರಾಫಿಕ್ ನಲ್ಲಿ ಕಾರು ನಿಲ್ಲಿಸಿದ್ದ ದ್ರಾವಿಡ್. ನಿಂತಿದ್ದ ದ್ರಾವಿಡ್ ಕಾರಿಗೆ ಹಿಂದಿನಿಂದ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ದ್ರಾವಿಡ್ ಹಾಗೂ ಗೂಡ್ಸ್ ಚಾಲಕನ ನಡುವೆ ಸಣ್ಣ ಮಾತಿನ ಚಕಮಕಿ ನಡೆದಿದ್ದು, ಮಾತುಕತೆ ಬಳಿಕ ಸ್ಥಳದಿಂದ ರಾಹುಲ್ ದ್ರಾವಿಡ್ ತೆರಳಿದ್ದಾರೆ.