ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 5 ರಂದು (ಇಂದು) ನಡೆಯಲಿದ್ದು, ಫೆ.8ಕ್ಕೆ ಫಲಿತಾಂಶ ಹೊರಬರಲಿದೆ. ದೆಹಲಿಯ ಎಲ್ಲಾ 70 ಸ್ಥಾನಗಳಿಗೂ ಇಂದು ಬೆಳಿಗ್ಗೆ 7 ಗಂಟೆಯಿಂದ ಮತದಾನ ನಡೆಯಲಿದ್ದು, ದೆಹಲಿಯ 1 ಕೋಟಿ 55 ಲಕ್ಷ ಮತದಾರರು ದೆಹಲಿಯ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ.
ದೆಹಲಿಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ರಾಜ್ಯದ ಆಡಳಿತ ಪಕ್ಷ ಎಎಪಿ. ಈ ಬಾರಿ ಚುನಾವಣೆಯಲ್ಲಿ ಎಎಪಿ, ಕಾಂಗ್ರೆಸ್ ಮತ್ತು ಬಿಜೆಪಿ ತ್ರಿಕೋಣ ಸ್ಪರ್ಧೆ ಇದೆ.
ಇನ್ನೂ ಚುನಾವಣಾ ಆಯೋಗ ಚುನಾವಣೆಯನ್ನು ನ್ಯಾಯಸಮತವಾಗಿ ನಡೆಸಲು ಸಕಲ ರೀತಿಯಲ್ಲಿ ತಯಾರಿ ನಡೆಸಿದೆ. 3 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಎಲ್ಲವೂ ಸೂಕ್ಷ್ಮ ಎಂದು ಗುರುತಿಸಲಾಗಿದೆ.
ನಿಮ್ಮ ಕನಸಲ್ಲಿ ಯಾರಾದ್ರು ಮೃತಪಟ್ಟಂತೆ ಕಾಣಿಸಿಕೊಂಡ್ರೆ ಏನಾಗುತ್ತೆ..? ಇದರ ಹಿಂದಿದೆ ಸ್ಫೋಟಕ ರಹಸ್ಯ!
ಆದ್ದರಿಂದ ಚುನಾವಣಾ ಭದ್ರತೆಗೆ ಹೆಚ್ಚಿನ ಗಮನ ನೀಡಲಾಗಿದೆ. 150 ಪ್ಯಾರಾ ಮಿಲಿಟರಿ ಪಡೆಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಅಲ್ಲದೇ ದೆಹಲಿಯ ತುಂಬಾ 30,000 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. 5 ಗಂಟೆಯ ಒಳಗೆ ಮತಗಟ್ಟೆಗೆ ಬಂದವರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ.