ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಉತ್ಸವವಾಗಿರುವ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದಾರೆ. ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಮಿಂದೆದ್ದಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಯವರೊಂದಿಗೆ ಹಾಜರಿದ್ದರು.
Railway Jobs: SSLC, ITI ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ..! ಮಾಸಿಕ ವೇತನ ₹ 20,000
ಜನವರಿ 13 ರಂದು ಪ್ರಾರಂಭವಾದ ಮಹಾಕುಂಭದಲ್ಲಿ ಇಲ್ಲಿಯವರೆಗೆ 14 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರುದ್ರಾಕ್ಷಿ ಮಾಲೆ ಹಿಡಿದು ಸೂರ್ಯನಿಗೆ ನಮಸ್ಕಾರ ಮಾಡಿ ಅರ್ಘ್ಯ ಅರ್ಪಿಸಿ ಮಂತ್ರೋಚ್ಛಾರಣೆ ಮಾಡಿ ಮೂರು ಬಾರಿ ಪವಿತ್ರ ತ್ರಿವೇಣಿ ಸಂಗಮದಲ್ಲಿ ಮುಳುಗೆದ್ದರು.
ಇವರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಕಿರಣ್ ರಿಜಿಜು, ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ನಾಯಕರು ಕೂಡ ಪವಿತ್ರ ಸ್ನಾನ ಮಾಡಿದ್ದಾರೆ. ಇದಲ್ಲದೆ ಅನೇಕ ದೇಶಗಳ ಪ್ರತಿನಿಧಿಗಳು ಕೂಡ ಆಗಮಿಸಿದ್ದರು.