ಬಳ್ಳಾರಿ : ನಗರದ ದುರ್ಗಮ್ಮ ಗುಡಿ ಅಂಡರ್ ಪಾಸ್ ಓಪನ್ ಮಾಡಲು ಒತ್ತಾಯಿಸಿ ಬಿಜೆಪಿ ಎಮ್ಎಲ್ಸಿ ವೈ ಎಂ ಸತೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾಮಗಾರಿ ಹಿನ್ನೆಲೆ ಕಳೆದ ಮೂರು ತಿಂಗಳಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿತ್ತು. ಆದರೆ ಜ.30ಕ್ಕೆ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿ ಪೂರ್ಣಗೊಂಡರೂ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿಲ್ಲ. ಇದರಿಂದಾಗಿ ಅನುವು ನಗರದಲ್ಲಿ ಟ್ರಾಫಿಕ್ ಹೆಚ್ಚಾಗುತ್ತಿದೆ. ಯಾರೋ ಒಬ್ಬರ ಹಿತಾಸಕ್ತಿಗೆ ಇಡೀ ನಗರದ ಜನ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಇಂದು ಬ್ಯಾರಿಕೇಡ್ ಓಪನ್ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ರೆ ಹಾಕಿರೋ ಬ್ಯಾರಿಕೇಡ್ ತೆರವುಗೊಳಿಸವುದಾಗಿ ಪಟ್ಟು ಹಿಡಿದಿದ್ದು, ಈ ವೇಳೆ ಪೊಲೀಸರು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು, ಕೆಲ ಹೊತ್ತು ಉದ್ವಿಘ್ನ ವಾತಾವರಣ ನಿರ್ಮಾಣವಾಗಿತ್ತು.