ನವದೆಹಲಿ:- ವಿಜಯೇಂದ್ರ ಕರ್ಮಕಾಂಡ, ಹಲ್ಕಾ ಕೆಲಸ ಬಹಳ ಇದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ವಿಜಯೇಂದ್ರ ಕರ್ಮಕಾಂಡ, ಹಲ್ಕಾ ಕೆಲಸ ಬಹಳ ಇದೆ. ಅದ್ರೆ ಸಿದ್ದರಾಮಯ್ಯ, ವಿಜಯೇಂದ್ರ ಅಡ್ಜಸ್ಟ್ಮೆಂಟ್ ರಾಜಕೀಯ ಮಾಡುತ್ತಿದ್ದಾರೆ ಎಂದರು.
ಸುದೀಪ್ ಅಳಿಯನ ಸಿನಿಮಾಗೆ ಶೀರ್ಷಿಕೆ ಫಿಕ್ಸ್: ರೆಟ್ರೋ ಲುಕ್ ನಲ್ಲಿ ಸಂಚಿತ್
ನಿನ್ನೆ ನಮ್ಮ ಕೆಲವು ನಾಯಕರು ಕೆಲವರನ್ನು ಭೇಟಿಯಾಗಿದ್ದಾರೆ. ಇಂದು ಲಿಂಗಾಯತ ನಾಯಕರು ಹೈಕಮಾಂಡ್ ಭೇಟಿ ಮಾಡುತ್ತೇವೆ. ರಾಜ್ಯದಲ್ಲಿ ಎಲ್ಲ ಲಿಂಗಾಯತರು ಬಿಎಸ್ವೈ ಪರವಾಗಿಲ್ಲ. ಅವರು ಆ ಗೌರವ ಉಳಿಸಿಕೊಂಡಿಲ್ಲ. ವಿಜಯೇಂದ್ರನನ್ನು ಅಧ್ಯಕ್ಷ ಮಾಡುವುದಕ್ಕೆ ನಮ್ಮ ವಿರೋಧವಿದೆ. ಇಬ್ಬರು, ಮೂವರು ಪೇಮೆಂಟ್ ಸ್ವಾಮಿಗಳು ಅವರ ಜೊತೆಗಿದ್ದಾರೆ ಅಷ್ಟೇ. ವಿಜಯೇಂದ್ರ ಬಿಎಸ್ವೈ ಅವರು ನಕಲಿ ಸಹಿ ಮಾಡಿದ್ದಾರೆ. ಆದರೆ ಈ ಕುರಿತು ಸಿದ್ದರಾಮಯ್ಯ ಅವರಿಗೆ ತನಿಖೆ ಮಾಡಲು ಏನು ಕಷ್ಟ. ಎಲ್ಲ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ವಿಜಯೇಂದ್ರ ಕರ್ಮಕಾಂಡ, ಹಲ್ಕಾ ಕೆಲಸ ಬಹಳ ಇದೆ ಎಂದು ವಾಗ್ದಾಳಿ ನಡೆಸಿದರು